Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತು ಮಾಡಿದ ಸರ್ಕಾರ..!

---Advertisement---

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಸರ್ಕಾರ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದೆ. ರಾಮಚಂದ್ರ ರಾವ್ DCRE DGP ಆಗಿ ಕೆಲಸ ಮಾಡುತ್ತಿದ್ದರು. ಬೆಳಗಾವಿಯಲ್ಲಿ ಐಜಿಪಿ ಆಗಿದ್ದಾಗ ನಡೆಸಿದ ರಾಸಲೀಲೆ ವಿಡಿಯೋಗಳು ಈಗ ವೈರಲ್ ಆಗಿವೆ. ಅದರಲ್ಲೂ ಒಂದು ವಿಡಿಯೋ ಅಲ್ಲ ಹಲವು ಮಹಿಳೆಯರ ಜೊತೆಗೆ ಯೂನಿಫಾರ್ಮ್ ನಲ್ಲಿಯೇ ಸರಸವಾಡಿದ್ದರು.

ವಿಡಿಯೋ ವೈರಲ್ ಬೆನ್ನಲ್ಲೇ, ಅಧಿಕಾರಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ವಿರುದ್ಧ ತಡವಾಗಿ ಸರ್ಕಾರ ಕ್ರಮಕೈಗೊಂಡಿತಾ ಎಂಬ ಪ್ರಶ್ನೆಯೂ ಎದ್ದಿದೆ. ಅಧಿವೇಶನದಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಈಗ ಸಸ್ಪೆಂಡ್​ ಮಾಡಿದೆ ಎನ್ನಲಾಗುತ್ತಿದೆ. ಜನವರಿ 24ಕ್ಕೆ ವಿಶೇಷ ಜಂಟಿ ಅಧಿವೇಶನವನ್ನು ಸರ್ಕಾರ ಕರೆದಿದೆ. ಇನ್ನು ಅಧಿವೇಶನದಲ್ಲಿ ಡಿಜಿಪಿ ಪ್ರಕರಣ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಪ್ಲಾನ್ ಮಾಡಿದೆ. ವಿಪಕ್ಷಗಳ ಬಾಯಿಗೆ ಆಹಾರವಾಗದೇ ಇರಲು ಡಿಜಿಪಿ ಅಮಾನತು ಮಾಡಿದೆ.

ಡಿಜಿಪಿ ರಾಮಚಂದ್ರ ರಾವ್ ಅವರು ಈ ಸಂಬಂಧ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದರು. ಈ ವಿಡಿಯೋ ನನ್ನದಲ್ಲ, ಇದರ ಬಗ್ಗೆ ತನಿಖೆ ಆಗ್ಲಿ ಅಂತ ರಾಮಚಂದ್ರ ರಾವ್ ಅವರೇ ತಿಳಿಸಿದ್ದರು. ನಿನ್ನೆಯೆಲ್ಲಾ ವಿಡಿಯೋ ಲೀಕ್ ಆಗಿತ್ತು. ಇಂದು ಬೆಳಗ್ಗೆ ರಾಸಲೀಲೆಯ ಆಡಿಯೋ ಲೀಕ್ ಆಗಿದೆ. ಇದೀಗ ವಿಚಾರದ ಗಂಭೀರತೆಯನ್ನು ಅರಿತ ಸರ್ಕಾರ ಅಮಾನತು ಮಾಡಿ, ಆದೇಶ ಹೊರಡಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now