ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಕಾಂಗ್ರೆಸ್ ಸರ್ಕಾರದಲ್ಲಿ ಇನ್ನು ಕಗ್ಗಂಟಾಗಿಯೇ ಉಳಿದಿದೆ. ರಣದೀಪ್ ಸುರ್ಜೆವಾಲ್ ಅವರ ನೇತೃತ್ವದಲ್ಲಿ ಸಭೆ ನಡೆದರು ಕೂಡ ಇನ್ನು ಪಟ್ಟಿ ಫೈನಲ್ ಆಗಿಲ್ಲ. ಈ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದೆ. ಟ್ವೀಟ್ ಮೂಲಕ ಕಲೆಕ್ಷನ್ ಬಗ್ಗೆ ಮಾತನಾಡಿದೆ.
‘ಈಗಾಗಲೇ ವರ್ಗಾವಣೆಯನ್ನು ಫೋನ್ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ @siddaramaiah ಅವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ @rssurjewala ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ.
ಕಾಂಗ್ರೆಸ್ ಬಂದಿದೆ, ಕ್ರೈಂ ರೇಟ್ ಹೆಚ್ಚಿದೆ. ಸರ್ಕಾರವೇ ಕಲೆಕ್ಷನ್ ದಂಧೆ ಮಾಡಿಕೊಳ್ಳುತ್ತಾ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವಾಗ ವೃತ್ತಿಪರ ಖದೀಮರು ಸುಮ್ಮನಿರುತ್ತಾರಾ? ಕೊಲೆ, ದರೋಡೆ, ಸುಲಿಗೆ, ಕಳ್ಳತನ ಸೇರಿದಂತೆ ಎಲ್ಲಾ ರೀತಿಯ ಅಪರಾಧ ಪ್ರಕರಣಗಳೂ @INCKarnataka ಸರ್ಕಾರ ಬಂದಾಗಿನಿಂದ ಹೆಚ್ಚಾಗಿದೆ. ನಾಲ್ಕೇ ತಿಂಗಳಲ್ಲಿ 43,412 ಪ್ರಕರಣ ದಾಖಲಾಗುವ ಮೂಲಕ ಕರ್ನಾಟಕ ಕ್ರಿಮಿನಲ್‌ಗಳ ಬೀಡಾಗಿದೆ ಎಂದು ಟ್ವೀಟ್ ಮಾಡಿದೆ.