ರಾಜ್ಯ ಸರ್ಕಾರ ಕೊಟ್ಟ ಭಾಷಣವನ್ನ ಬದಲಿಸದೆ ಓದಿದ ರಾಜ್ಯಪಾಲರು..!

1 Min Read

 

ಬೆಂಗಳೂರು: 77ನೇ ಗಣರಾಜ್ಯೋತ್ಸವದ ಸಂಭ್ರಮ ಎಲ್ಲೆಲ್ಲೂ ಹಬ್ಬದ ವಾತಾವರಣ ಮನೆ ಮಾಡಿದೆ. ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು. ರಾಜ್ಯ ಸರ್ಕಾರವೇ ರಾಜ್ಯಪಾಲರಿಗೆ ಭಾಷಣವನ್ನು ಒದಗಿಸುತ್ತದೆ. ಆದರೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನ ಟೀಕೆ ಮಾಡಿದ್ದಕ್ಕೆ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಗಣರಾಜ್ಯೋತ್ಸವದ ಭಾಷಣಕ್ಕೂ ತಗಾದೆ ತೆಗೆದಿದ್ದ ರಾಜ್ಯಪಾಲರು ಇದೀಗ ಸರ್ಕಾರ ನೀಡಿದ ಪೂರ್ತಿ ಭಾಷಣವನ್ನು ಓದಿದ್ದಾರೆ.

ಭಾಷಣದ ವೇಳೆ ರಾಜ್ಯ ಸರ್ಕಾರದ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಉಲ್ಲೇಖಿಸಿದ್ದಾರೆ. ಕರ್ನಾಟಕ ಸರ್ಕಾರವು ಸಂವಿಧಾನ ಪ್ರಸ್ತಾಪಿಸಿರುವ ಭಾತೃತ್ವ, ಸ್ವಾತಂತ್ರ್ಯ ಹಾಗೂ ಸಮಾನತೆಯ ಆದ್ಯತೆಯ ವಿಷಯಗಳನ್ನಾಗಿ ಪರಿಗಣಿಸಿದರ. ರಾಜ್ಯದ ಪ್ರತಿ ಪ್ರದೇಶ ಹಾಗೂ ಪ್ರತಿ ಸಮುದಾಯಗಳ ಜನರ ಧ್ವನಿಗಳನ್ನು ಆಲಿಸಿ, ಅವುಗಳಿಗೆ ನ್ಯಾಯಯೋಜಿತ ಪರಿಹಾರ ನೀಡುವ ಕೆಲಸವನ್ನು ಮಾಡುತ್ತಿದೆ.

ಸರ್ಕಾರದ ವಿವಿಧ ನೇಮಕಾತಿಗಳಲ್ಲಿ ಅಲಕ್ಷಿತರಿಗೆ ಪ್ರಾಧಾನ್ಯತರ ನೀಡಲಾಗುತ್ತದೆ. ವಿವಿಧ ಜನಸಮುದಾಯಗಳ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಳ್ಳಲು ಆಯೋಗಗಳನ್ನು ರಚಿಸಿ ಅವುಗಳ ಶಿಫಾರಸುಗಳನ್ನು ಜಾರಿ ಮಾಡಲಾಗುತ್ತಿದೆ. ಸಂವಿಧಾನದ ಮುಖ್ಯ ಆಶಯದಂತೆ ಅತ್ಯಂತ ಹಿಂದುಳಿದವರ ಬಲವರ್ಧನೆಗಾಗಿ ರಾಜ್ಯ ಜನರಿಗೆ ಆರ್ಥಿಕ ಚೈತನ್ಯ ನೀಡುವುದಕಗಕಾಗಿ ರಾಜ್ಯ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಕಲ್ಯಾಣಗಳಿಗಾಗಿ ರಾಜ್ಯವು ವರ್ಷಕ್ಕೆ 1.12 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1.13 ಲಕ್ಷ ಕೋಟಿಗೂ ಹೆಚ್ಚಿನ ಹಣವನ್ನು ಖರ್ಚು ಮಾಡಿದೆ ಎಂದು ರಾಜ್ಯ ಸರ್ಕಾರದ ಯೋಜನೆಗಳನ್ನು ಹೊಗಳಿದ್ದಾರೆ.

Share This Article