ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಲ್ಲ ಎಂದಿದ್ದ ರಾಜ್ಯಪಾಲರು : ಅಂತದ್ದೇನಿತ್ತು ಆ ಪತ್ರದಲ್ಲಿ..?

1 Min Read

ಬೆಂಗಳೂರು: ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ಭಾಷಣ ಮಾಡಲ್ಲ ಎಂದು ಹೇಳಿದ್ದರು. ಬಳಿಕ ಅವರ ಮನಸ್ಸನ್ನ ವೊಲಿಸಲಾಗಿದ್ದು, ಭಾಷಣ ಮಾಡಿದ್ದಾರೆ. ಹಾಗಾದ್ರೆ ಆರಂಭದಲ್ಲಿ ಭಾಷಣ ಮಾಡಲ್ಲ ಅಂದಿದ್ದಕ್ಕೆ ಕಾರಣವೇನು..? ಆ ಪತ್ರದಲ್ಲಿ ಅಂತದ್ದೇನಿತ್ತು..?

ನರೇಗಾದಲ್ಲಿನ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ವವನ್ನು ಧ್ವಂಸ ಮಾಡಿ, ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ. ಕಾರ್ಪೋರೇಟ್ ಬಂಡವಾಳಿಗರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ವಿಬಿ ಗ್ರಾಮ್ ಜಿ ಯೋಜನೆಯನ್ನು ರೂಪಿಸಲಾಗಿದೆ. ಆ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಲೆಗಳಂತೆ ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನತೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಗೆಲೆಗಳಂತೆ ಉದುರಿಸಲಾಗಿದೆ.

ಇಂತಹ ಪುಗತಿ ವಿರೋಧಿ ಕ್ರಮವನ್ನು ನನ್ನ ಸರ್ಕಾರ ಬಲವಾಗಿ ಖಂಡಿಸುತ್ತದೆ. ಹೆಸರಾಂತ ಮನರೇಗಾ ರಾಷ್ಟ್ರದಾದ್ಯಂತ ಪ್ರಸಿದ್ಧಿ ಪಡೆದಿತ್ತು. ಪ್ರಗತಿಯ ಪ್ರತೀಕವಾಗಿತ್ತು ಎಂಬುದನ್ನು ನೀರಿನಲ್ಲಿ ಹೋಮ ಮಾಡಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ತಿಲಾಂಜಲಿಯನ್ನಿಟ್ಟಿದೆ. ಮನರೇಗಾ ಕಾಯ್ದೆಯು ದಲಿತರು, ಆದಿವಾಸಿಗಳು, ಮಹಿಳೆಯರು, ಹಿಂದುಳಿದವರು, ರೈತಾಪಿ ಸಮುದಾಯಗಳ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕಾಯ್ದೆಯನ್ನು ರದ್ದುಗೊಳಿಸಿ, ಹೊಸ ಕಾಯ್ದೆಯನ್ನು ಜಾರಿಗೊಳಿಸುವಾಗ ರಾಜ್ಯಗಳ ಅಭಿಪ್ರಾಯ ಪಡೆಯಬೇಕಾಗಿತ್ತು ಎಂಬುದರ ಕುರಿತಾಗಿ ಪತ್ರದಲ್ಲಿ ಬರೆಯಲಾಗಿತ್ತು..

Share This Article