ವೈಭವದಿಂದ ಜರುಗಿದ ಹಟ್ಟಿ ತಿಪ್ಪೇಶನ ರಥೋತ್ಸವ ; ಮುಕ್ತಿ ಭಾವುಟ ಹರಾಜು..!

1 Min Read

ಚಿತ್ರದುರ್ಗ, ಮಾರ್ಚ್ 20: ಮಧ್ಯ ಕರ್ನಾಟಕದ ಪ್ರಸಿದ್ದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡರಥೋತ್ಸವ ಭಕ್ತರ ಸಮ್ಮುಖದಲ್ಲಿ ಭಾನುವಾರ  ವೈಭವದಿಂದ ನೆರವೇರಿತು.

ರಥೋತ್ಸವ ಪೂಜಾ ಕೈಂಕರ್ಯಗಳು ಮಧ್ಯಾಹ್ನ 2 ಗಂಟೆಯಿಂದಲೇ ಆರಂಭವಾದವು. ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿದ ನಂತರ ತಿಪ್ಪೇರುದ್ರಸ್ವಾಮಿ ವಿಗ್ರಹವನ್ನು ರಥದತ್ತ ಕೊಂಡೊಯ್ಯಲಾಯಿತು.

ಮುಕ್ತಿಭಾವುಟ ಹರಾಜು ಪ್ರಕ್ರಿಯೆ ಮುಕ್ತಾಯವಾದ ನಂತರ ರಥೋತ್ಸವ ನಡೆಯಿತು. ಮಹಾರಥೋತ್ಸವದಲ್ಲಿ ವಿರಾಜಮಾನವಾಗಿದ್ದ ಶ್ರೀಗುರು ತಿಪ್ಪೇರುದ್ರಸ್ವಾಮಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ರಥೋತ್ಸವದಲ್ಲಿ ಭಾಗಿವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮಾತನಾಡಿ, ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದರಿಂದ ಜಾತ್ರೆಗೆ ಅನುಮತಿ ನೀಡಲಾಗಿತ್ತು. ರಥೋತ್ಸವ ಸಂಭ್ರಮದಿಂದ ನಡೆದಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ ಎಂದರು.

ಈ ಬಾರಿಯ ತಿಪ್ಪೇರುದ್ರಸ್ವಾಮಿಯ ಮುಕ್ತಿಭಾವುಟ ರೂ.16 ಲಕ್ಷಕ್ಕೆ ಹಾರಾಜಾಗಿದೆ.ಕಳೆದ ಬಾರಿ ಮುಕ್ತಿಭಾವುಟ ರೂ.28 ಲಕ್ಷಕ್ಕೆ ಹರಾಜಾಗಿತ್ತು ಎಂದು ಹೇಳಿದರು.

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯಿಂದ ವ್ಯವಸ್ಥಿತವಾಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಸಿ ಕ್ಯಾಮೆರಾ, ದ್ವಿಚಕ್ರ ವಾಹನ, ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಿ, ಜಾತ್ರೆಗೆ ಆಗಮಿಸಿದ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಸುಗಮವಾಗಿ ನಡೆದಿದೆ ಎಂದರು.

ರಥೋತ್ಸವದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ ಟಿ.ರಘುಮೂರ್ತಿ, ಜಿಲ್ಲಾ ರಕ್ಷಣಾಧಿಕಾರಿ ಪರಶುರಾಂ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *