Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಸಕಲೇಶಪುರದಲ್ಲಿ ದೇವೇಗೌಡ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭೂ ಸ್ಪರ್ಶ..!

---Advertisement---

 

ಹಾಸನ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಓಡಾಟ ನಡೆಸುತ್ತಿದ್ದಾರೆ. ವಯಸ್ಸು, ಆರೋಗ್ಯವನ್ನು ಲೆಕ್ಕಿಸದೆ ಓಡಾಡುತ್ತಿದ್ದಾರೆ. ಹೀಗೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಗೆ ಪ್ರಚಾರಕ್ಕೆಂದು ತೆರಳಿದ್ದರು. ಈ ವೇಳೆ ಮಾಜಿ ಪ್ರಧಾನಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭೂ ಸ್ಪರ್ಶವಾಗಿದೆ. ಸಕಲೇಶಪುರದ ಪಟ್ಟಣ ತಾಲೂಕು ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ದೇವೇಗೌಡ ಅವರು ಸಕಲೇಶಪುರದ ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿ ಅರಕಲಗೂಡಿಗೆ ಹೊರಟಿದ್ದರು. ಅಲ್ಲಿ ಹೆಚ್ ಕೆ ಕುಮಾರಸ್ವಾಮಿ ಅವರ ಪರ ಮತಯಾಚನೆಗೆ ಹೊರಟಿದ್ದರು.

ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆಯೇ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಕೂಡಲೇ ಎಚ್ಚೆತ್ತ ಪೈಲಟ್ ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ.‌ ದೇವೇಗೌಡರ ಜೊತೆಗೆ ಸಿ ಎಂ ಇಬ್ರಾಹಿಂ ಕೂಡ ಜೊತೆಗೆ ಇದ್ದರು. ಹೆಲಿಪ್ಯಾಡ್ ಗಿಂತ ಅಣತಿ ದೂರದಲ್ಲಿಯೇ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.

Join WhatsApp

Join Now

Join Telegram

Join Now

Leave a Comment