Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ  ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

---Advertisement---

ಸುದ್ದಿಒನ್, ಹಿರಿಯೂರು, ಡಿಸೆಂಬರ್. 24 : ಸಚಿವ ಬೈರತಿ ಸುರೇಶ್ ಪ್ರಮಾಣಿಸುತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಹಿರಿಯೂರಿನ ಬಳಿ  ತುರ್ತು ಭೂಸ್ಪರ್ಶ ಆದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲೂಕಿನ ಆರನಕಟ್ಟಿ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಇಂದು (ಭಾನುವಾರ) ಬೆಳಿಗ್ಗೆ 11:30 ರ ಸಮಯಕ್ಕೆ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿದೆ.

ಸಚಿವ ಭೈರತಿ ಸುರೇಶ್ ಅವರು ಬೆಂಗಳೂರಿನಿಂದ ಗದಗ ಜಿಲ್ಲೆಯ ಸಂಕೇಶ್ವರ ಕಡೆಗೆ ಕಾರ್ಯಕ್ರಮ ನಿಮಿತ್ತ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆ ಕಾರಣ ಅಲ್ಲಿಂದ ಕಾರಿನ ಮೂಲಕ ಸಂಕೇಶ್ವರ ಕಡೆಗೆ ತೆರಳಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಹಾಗೂ ದುರ್ಘಟನೆ ಸಂಭವಿಸಿಲ್ಲ. ಹೆಲಿಕ್ಯಾಪ್ಟರ್ ನೋಡಲು ಗ್ರಾಮದ ಸುತ್ತಮುತ್ತಲಿನ ಜನರು ಬಂದು ವೀಕ್ಷಣೆ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment