ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಎತ್ತಿ ಹಿಡಿದ ಹೈಕೋರ್ಟ್ : ಸಿಎಂ ಮುಂದಿನ ನಡೆ ಏನು..?

1 Min Read

 

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಇಂದು ಕೋರ್ಟ್ ನಿಂದ ಮಹತ್ವದ ತೀರ್ಪು ನೀಡಿದೆ. ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಗಬಹುದು ಎಂದೇ ಎಲ್ಲರೂ ಭಾವಿಸಲಾಗಿತ್ತು. ಆದರೆ ಹೈಕೋರ್ಟ್ ಮಾತ್ರ ರಿಲೀಫ್ ನೀಡಿಲ್ಲ. ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನ್ನೇ ಹೈಕೋರ್ಟ್ ಎತ್ತಿ ಹಿಡಿದಿದೆ.

ಮೂಡಾ ಹಗರಣಕ್ಕೆ‌ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಆರ್ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಂ ಖಾಸಗಿ ದೂರಿ ನೀಡಿದ್ದರು. ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ಇದೀಗ ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ನಿಂದ ಈ ಮಹತ್ವದ ತೀರ್ಪು ಹೊರ ಬಿದ್ದ ಮೇಲೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲರು ಇಂದು ಮಧ್ಯಾಹ್ನ 2.30ಕ್ಕೆ ಆದೇಶದ ಪ್ರತಿ ಪಡೆಯಬೇಕು. ಅದನ್ನ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಇಂದೇ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ಕೋರುವ ಸಾಧ್ಯತೆಯು ಇದೆ. ಹೈಕೋರ್ಟ್ ನಿಂದ ಈ ತೀರ್ಪು ನಿರೀಕ್ಷೆ ಮಾಡಿದ್ದ ಸಿದ್ದರಾಮಯ್ಯ ಅವರು ಮುಂದಿನ ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ. ಪ್ರಾಸಿಕ್ಯೂಷನ್ ಗೆ ನೀಡಿದ್ದನ್ನು ಪ್ರಶ್ನಿಸಿ ಮುಂದಿ‌ನ ಕಾನೂನು ಹೋರಾಟ ಮಾಡಲಿದ್ದಾರೆ‌. ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ದರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *