ಅದ್ದೂರಿಯಾಗಿ ಪುರ ಪ್ರವೇಶಿಸಿದ ಹಿಂದೂ ಮಹಾ ಗಣಪತಿ : ಸೆಪ್ಟೆಂಬರ್ 7 ರಂದು ಪ್ರತಿಷ್ಟಾಪನೆ

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಷ್ಠಾಪನೆಯಾಗಲಿರುವ ಹಿಂದೂ ಮಹಾ ಗಣಪತಿ ಬುಧವಾರ ಪುರ ಪ್ರವೇಶಿಸಿತು.

ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದಿಂದ ಅದ್ದೂರಿ ಮೆರವಣಿಗೆ ಮೂಲಕ ಹೊರಟ ಹಿಂದೂ ಮಹಾ ಗಣಪತಿ ಹೆದ್ದಾರಿಯಿಂದ ಚಳ್ಳಕೆರೆ ಗೇಟ್ ಮೂಲಕ ಪಂಚಾಚಾರ್ಯ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಪೆಂಡಾಲ್‍ಗೆ ಆಗಮಿಸಿತು.

ಕೇಸರಿ ಭಾವುಟ, ಜೈಶ್ರೀರಾಮ್ ಎಂದು ಬರೆದಿದ್ದ ಹನುಮನ ಭಾವಚಿತ್ರವುಳ್ಳ ಭಾವುಟಗಳು, ಶಾರದಾ ಬ್ರಾಸ್ ಬ್ಯಾಂಡ್‍ನ ವಾದ್ಯ ಮೆರವಣಿಗೆಯಲ್ಲಿ ರಾರಾಜಿಸಿದವು. ಸಾವಿರಾರು ಯುವಕರು ಬೈಕ್‍ಗಳಲ್ಲಿ ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಹಿಂದೂ ಮಹಾಗಣಪತಿಕೀ ಜೈ ಎಂದು ಕೂಗುತ್ತಾ ಕುಣಿದು ಕುಪ್ಪಳಿಸಿದರು. ಚಳ್ಳಕೆರೆ ಗೇಟ್‍ನಲ್ಲಿ ಡೊಳ್ಳು, ತಮಟೆ ಮೂಲಕ ಹಿಂದೂ ಮಹಾ ಗಣಪತಿಯನ್ನು ಬರಮಾಡಿಕೊಳ್ಳಲಾಯಿತು.

ಗರುಡನ ಮೇಲೆ ವಿರಾಜಮಾನವಾಗಿರುವ ಹಿಂದೂ ಮಹಾಗಣಪತಿಯನ್ನು ವೀಕ್ಷಿಸಲು ಸಹಸ್ರಾರು ಜನ ಜಮಾಯಿಸಿದ್ದರು. ನೆರೆದಿದ್ದ ಜನರು ತಮ್ಮ ಮೊಬೈಲ್ ಗಳಲ್ಲಿ ಹಿಂದೂ ಮಹಾಗಣಪತಿ ಆಗಮಿಸಿದ್ದ ದೃಶ್ಯಗಳನ್ನು ಸೆರೆಹಿಡಿದು, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಸೆಪ್ಟೆಂಬರ್ 7 ರಂದು ಮಹಾಗಣಪತಿ ಪ್ರತಿಷ್ಠಾಪನೆ ನಡೆಯಲಿದ್ದು 21 ದಿನಗಳ ಕಾಲ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 26 ರಂದು ಕನಕ ವೃತ್ತದಿಂದ ಹೊರಡುವ ಬೈಕ್ ರ್ಯಾಲಿ ನಗರದೆಲ್ಲೆಡೆ ಸಂಚರಿಸಲಿದ್ದು, 28 ರಂದು ಬೃಹತ್ ಶೋಭಾಯಾತ್ರೆ ಮೂಲಕ ವಿಸರ್ಜಿಸಲಾಗುವುದು.

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು ಹಿಂದೂ ಮಹಾ ಗಣಪತಿ ಪುರ ಪ್ರವೇಶದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *