Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

The Kerala story ಸಿನಿಮಾ ನಟಿಗೆ ಅಪಘಾತ : ಈಗ ಹೇಗಿದ್ದಾರೆ ಅದಾ ಶರ್ಮಾ..?

---Advertisement---

 

 

ದಿ ಕೇರಳ ಸ್ಟೋರಿ ಸಿನಿಮಾ ಸಿಕ್ಕಾಪಟ್ಟೆ ವಿವಾದಕ್ಕೆ ಒಳಗಾಗಿರುವ ಸಿನಿಮಾ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟಿ ಅದಾ ಶರ್ಮಾಗೆ ಅಪಘಾತವಾಗಿದೆ ಎಂದು ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ನಿನ್ನೆ ಅಪಘಾತ ಸಂಭವಿಸಿದ್ದು, ಇಂದು ನಟಿ ಅದಾ ಶರ್ಮಾ ಅವರೇ ತಮ್ಮ‌ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟಿ ಅದಾ‌ ಶರ್ಮಾ, ಯಾರು ಆತಂಕಕ್ಕೆ ಒಳಗಾಗುವುದು ಬೇಡ. ನಾನು ಆರಾಮವಾಗಿ ಇದ್ದೇನೆ. ರಸ್ತೆ ಅಪಘಾತದ ಸುದ್ದಿ ಕೇಳಿ ಸಿಕ್ಕಾಪಟ್ಟೆ‌ಮೆಸೇಜ್ ಗಳು ಬಂದಿವೆ. ಆದರೆ ಅಭಿಮಾನಿಗಳು ಆತಂಕಗೊಳ್ಳುವುದು ಬೇಡ. ನಾನು ಆರಾಮವಾಗಿದ್ದೇನೆ. ಅಷ್ಟೇ ಅಲ್ಲ, ನನ್ನ ತಂಡದವರು ಆರಾಮವಾಗಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.

ದಿ‌ ಕೇರಳ ಸ್ಟೋರಿ ಸಿನಿಮಾದಲ್ಲಿ ಹಿಂದೂ ಹುಡುಗಿ ಮತಾಂತರಗೊಂಡು ಮುಸ್ಲಿಂ ಆಗುವ ಕಥೆ. ಈ ಸಿನಿಮಾದಲ್ಲಿ ಅದಾ ಶರ್ಮಾ, ಆ ಪಾತ್ರ ಮಾಡಿದ್ದಾರೆ. ಹೀಗಾಗಿ ಅದಾ ಶರ್ಮಾಗೆ ಈಗಾಗಲೇ ಸಾಕಷ್ಟು ಜೀವ ಬೆದರಿಕೆಗಳು ಬರುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...