Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಬೆಂಗಳೂರಿನಲ್ಲಿ ಹುತಾತ್ಮ ಯೋಧ ಪ್ರಾಂಜಲ್ ಅಂತ್ಯ ಸಂಸ್ಕಾರ

---Advertisement---

ಬೆಂಗಳೂರು: ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರಲ್ಲಿ ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಯೋಧ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಯೋಧ ಪ್ರಾಂಜಲ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸುತ್ತಿವೆ.

 

ಜಿಗಣಿಯ ನಂದನವನ ಬಡಾವಣೆಯಲ್ಲಿರುವ ನಿವಾಸಕ್ಕೆ ಪಾರ್ಥಿವ ಶರೀರ ಇಂದು ಆಗಮಿಸಲಿದೆ. ಮನೆಗೆ ಹತ್ತಿರದಲ್ಲಿರುವ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಳೆದ ಆರು ತಿಂಗಳ ಹಿಂದೆ ಮನೆಗೆ ಆಗಮಿಸಿದ್ದ ಪ್ರಾಂಜಲ್, ಮನೆಯಲ್ಲಿ ಹಮ್ಮಿಕೊಂಡಿದ್ದ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದರು. ಒಂದು ವಾರ ಪೋಷಕರ ಜೊತೆ ಇದ್ದು ಕರ್ತವ್ಯಕ್ಕೆ ತೆರಳಿದ್ದ ಪ್ರಾಂಜಲ್ ಇದೀಗ ಮನೆಗೆ ವಾಪಸ್ ಆಗಿದ್ದು ಹುತಾತ್ಮರಾಗಿ.

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್​ ಅನ್ನು ಲೀಡ್ ಮಾಡುತ್ತಿದ್ದರು. ಇತ್ತೀಚೆಗೆ ವೆಂಕಟೇಶ್ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ನಂದನವನದಲ್ಲಿ ನೆಲೆಸಿದ್ದರು. ಕ್ಯಾಪ್ಟನ್ ಪ್ರಾಂಜಲ್ ಕಳೆದ ಎರಡು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ಅದಿತಿ, ಚೆನ್ನೈನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಪತಿ ನಿಧನದಿಂದಾಗಿ ಜಿಗಣಿಗೆ ಬಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment