Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದ ದರ್ಸನ್ ಅವರ ಅರ್ಜಿಯನ್ನು ವಕೀಲರೇ ಹಿಂಪಡೆದಿದ್ದಾರೆ..!

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ದರ್ಶನ್ ಅವರಿಗೆ ಅಲ್ಲಿನ ವಾತಾವರಣ ಸರಿಯಾಗುತ್ತಿಲ್ಲ. ಜೈಲೂಟದಿಂದ ಆರೋಗ್ಯ ಏರುಪೇರಾಗುತ್ತಿದೆ. ತೂಕ ಇಳಿಕೆಯಾಗುತ್ತಿದೆ ಎಂಬೆಲ್ಲಾ ವಿಚಾರಗಳು ಹೊರಗೆ ಬರುತ್ತಿವೆ. ದರ್ಶನ್ ಅವರಿಗೆ ಮನೆಯ ಊಟ, ಪುಸ್ತಕ, ಹಾಸಿಗೆ ನೀಡುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಅವರ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ನಲ್ಲಿ ಎರಡು ಬಾರಿ ಕೋರ್ಟ್ ನಲ್ಲಿ ವಿಚಾರಣೆ ನಡೆದರು, ಅನುಮತಿ ನೀಡಿರಲಿಲ್ಲ. ಇಂದು ಅರ್ಜಿ ವಿಚಾರಣೆ ಇತ್ತು. ಆದರೆ ವಕೀಲರೇ ಅರ್ಜಿ ವಾಪಾಸ್ ಪಡೆದಿದ್ದಾರೆ. ಅದಕ್ಕೂ ಕಾರಣವಿದೆ.

ಈ ಪ್ರಕರಣ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಆದರೆ ಇಲ್ಲಿ ಅರ್ಜಿಯನ್ನು ತಾಂತ್ರಿಕ ಕಾರಣದಿಂದ ವಕೀಲರು ಹಿಂಪಡೆದಿದ್ದು, ಇನ್ನೊಂದು ಹೊಸ ಅರ್ಜಿಯನ್ನು ಸಲ್ಲಿಸಲೆಂದೇ ಈ ಅರ್ಜಿಯನ್ನು ಹಿಂಪಡೆದಿದ್ದಾರೆ. ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಬೇಕಾಗಿರುವ ಕಾರಣ ಈ ಹಿಂದಿನ ಹಳೆಯ ಅರ್ಜಿಯನ್ನು ವಾಪಾಸ್ ಪಡೆದು, ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಮ್ಯಾಜಿಸ್ಟ್ರೇಟ್ ಅರ್ಜಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಆದರೆ ಈ ಅರ್ಜಿಯನ್ನು ಮೊದಲು ಹೈಕೋರ್ಟ್ ನಲ್ಲಿಯೇ ಸಲ್ಲಿಸಲಾಗಿತ್ತು. ಹೈಕೋರ್ಟ್ ಮ್ಯಾಜಿಸ್ಟ್ರೇಟ್ ಗೆ ವರ್ಗಾವಣೆ ಮಾಡಿತ್ತು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಅವಕಾಶ ಕೇಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಗೆ ನೀಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment