Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಕ್ಕಲಿಗರ ಪಾಳಯದಲ್ಲಿಯೇ ಎದ್ದಿದೆ ಲಿಂಗಾಯತ ಸಿಎಂ ಕೂಗು..!

---Advertisement---

ಬೆಂಗಳೂರು; ಸಿದ್ದರಾಮಯ್ಯ ಸಿಎಂ ಅವಧಿ ಮುಗಿದ ಮೇಲೆ ಸಿಎಂ ಖುರ್ಚಿಗೆ ತೀರ ಸನಿಹದಲ್ಲಿ ನಿಂತಿರೋದೆ ಡಿಕೆ ಶಿವಕುಮಾರ್. ನೆಕ್ಸ್ಟ್ ಸಿಎಂ ಯಾರು ಅಂದ್ರೆ ಅದು ಡಿಕೆ ಶಿವಕುಮಾರ್ ಎಂಬ ಕೂಗು ಜೋರಾಗಿ ಕೇಳಿಸುತ್ತೆ. ಆದರೆ ಇದೀಗ ಒಕ್ಕಲಿಗರ ಸಮುದಾಯದಲ್ಲಿಯೇ ಲಿಂಗಾಯತ ಸಿಎಂ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ.

ಅದರಲ್ಲೂ ಒಕ್ಕಲಿಗರ ಭದ್ರಕೋಟೆಯಾದ ಮಂಡ್ಯದಲ್ಲಿ ಲಿಂಗಾಯತ ಸಿಎಂ ವಿಚಾರ ಮುನ್ನಲೆಗೆ ಬಂದಿದೆ. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೇ ಲಿಂಗಾಯತ ಸಮುದಾಯಕ್ಕೆ ಜೈಕಾರ ಹಾಕಿರೋದು ಆಶ್ಚರ್ಯವೆನಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತರಾಗಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಅವರು, ಮಂಡ್ಯದಲ್ಲಿಯೇ ಸಚಿವ ಎಂಬಿ ಪಾಟೀಲ್ ಅವರಿಗೆ ಮಣೆ ಹಾಕಿದ್ದಾರೆ.

ಎಂಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,‌ ನಮ್ಮ ಜಿಲ್ಲೆಯ ಸುಪುತ್ರ. ಭವುಷ್ಯದ ನಾಯಕ ಎಂದೆಲ್ಲಾ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಶಾಸಕ ಬಿಜೆಪಿಯ ರಾಜ್ಯಾಧ್ಯಕ್ಷರನ್ನು ಹೊಗಳಿದ್ದು ಆಶ್ಚರ್ಯವಾಗಿದೆ. ಆ ಮೂಲಕ ಕಾಂಗ್ರೆಸ್ ನಲ್ಲೂ ಲಿಂಗಾಯತ ಸಮುದಾಯದ ಸಿಎಂ ಸ್ಥಾನಕ್ಕೆ ಹಲವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅದರಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಿಂದಾನೇ ಜೈಕಾರ ಸಿಕ್ಕಿರೋದು ಆಶ್ಚರ್ಯವಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತ ತಪಸ್ಸು ಮಾಡ್ತಾ ಇದ್ದಾರೆ. ಈ ಅವಧಿಯಲ್ಲಿಯೇ 50-50 ಅನ್ನೋ ಮಾತು ಕೂಡ ಇದೆ. ಸಿದ್ದರಾಮಯ್ಯ ಆದ್ಮೇಲೆ ನೆಕ್ಸ್ಟ್ ಸಿಎಂ ಎಂಬ ನಂಬಿಕೆ ಕೂಡ ಡಿಕೆ ಶಿವಕುಮಾರ್ ಇಟ್ಟುಕೊಂಡಿದ್ದಾರೆ. ಹೀಗಿರುವಾಗ ಆಪ್ತ ಬಳಗವೇ ಈ ರೀತಿಯ ಹೇಳಿಕೆ ಕೊಟ್ಟರೆ ಹೇಗೆ ಅನ್ನೋ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಸ್ತಾ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment