ಬೆಳಗಾವಿ : ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದಾಗಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ.. ತಮ್ಮವರನ್ನು ಕಳೆದುಕೊಂಡು ಕುಟುಂಬಸ್ಥರು ದುಃಖದಲ್ಲಿದ್ದಾರೆ. ಆ ಕುಟುಂಬಸ್ಥರೊಂದಿಗೆ ನಾವಿದ್ದೇವೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರವನ್ನು ನೀಡಲಾಗುವುದು ಎಂದಿದ್ದಾರೆ.
The loss of lives due to a house collapse in Belagavi, Karnataka is saddening. My thoughts are with the bereaved kin in this hour of sadness. An ex-gratia of Rs. 2 lakh each from PMNRF would be paid to the next of kin of the deceased: PM @narendramodi
— PMO India (@PMOIndia) October 7, 2021
ಅದರಂತೆ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಈ ಸಂಬಂಧ ರಾಜ್ಯದ ಸಿಎಂ ಕೂಡ ಪರಿಹಾರ ಘೋಷಿಸಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿ, ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಅಂಕಲಗಿಯಲ್ಲಿ ಮನೆ ಕುಸಿದ ಪರಿಣಾಮ ಒಂದೇ ಕುಟುಂಬದ ಏಳು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಾಲಕಿ ಕೂಡ ಅಸುನೀಗಿದ್ದಾಳೆ. ಈ ಘಟನೆಗೆ ರಾಜ್ಯದ ಜನ ಮರುಗಿದ್ದಾರೆ. ಇದೀಗ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.