ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ.ನ. 15 : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ವಿಜಯೇಂದ್ರರವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡೆಯೂರಪ್ಪರವರ ನಿವಾಸದಲ್ಲಿ ಭೇಟಿ ಮಾಡಿದ ಚಿತ್ರದುರ್ಗದ ಬಿಜೆಪಿ ಪದಾಧಿಕಾರಿಗಳು ರಾಜ್ಯಾಧ್ಯಕ್ಷರಾಗಿ ನೇಮಕವಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರನ್ನು ಸಹಾ ಬೇಟಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ ಜಿಲ್ಲಾದ್ಯಕ್ಷರಾದ ಎ ಮುರಳಿ, ಖನಿಜ ನಿಗಮದ ಮಾಜಿ ಅದ್ಯಕ್ಷ ಎಸ್ ಲಿಂಗಮೂರ್ತಿ, ಡಾ ಸಿದ್ದಾರ್ಥ್, ಕೆ ಮಲ್ಲಿಕಾರ್ಜುನ್ , ಸುರೇಶ್ ಸಿದ್ದಾಪುರ ಮಾದುರಿ ಗಿರೀಶ್, ಸಂಪತ್‍ಕುಮಾರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ವೆಂಕಟೇಶ್, ಹನುಮಂತೆಗೌಡ, ಯಾದವ್, ಶಿವಣ್ಣಚಾರ್, ಇಂದ್ರಪ್ಪ, ದಗ್ಗೆಶಿವಪ್ರಕಾಶ್, ಕಲ್ಲೇಶಯ್ಯ,ಕಿರಣ್, ಯಶವಂತ್, ಡಾ ಮಂಜುನಾಥ್, ರಾಮರೆಡ್ಡಿ, ಶಂಭು, ಮೊರ್ಚ ಅದ್ಯಕ್ಷರು ಪಧಾದಿಕಾರಿಗಳು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








