ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ಸರ್ಕಾರ ತೆಗೆದುಕೊಂಡು ಹೋಗಿದ್ದ ನಾಲ್ಕು ಅನುಮೋದನೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವೆ ಇದ್ದ ಶೀತಲ ಸಮರ ಮುಂದುವರೆದಿದೆ ಎಂಬುದು ಕಾಣಿಸುತ್ತಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕಗಳು ಸೇರಿದಂತೆ ನಾಲ್ಕು ವಿದೇಯಕಗಳನ್ನ ರಾಜ್ಯಪಾಲರ ಬಳಿಗೆ ತೆಗೆದುಕೊಂಡು ಹೋಗಲಾಗಿತ್ತು. ಇದೀಗ ಅವುಗಳನ್ನು ನಿರಾಕರಿಸಲಾಗಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಿದ್ದ ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ ಬಿಲ್ 2024, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024, ಕರ್ನಾಟಕ ಸಹಕಾರಿ ಸೊಸೈಟಿ ತಿದ್ದುಪಡಿ ವಿಧೇಯಕ 2024 ಮತ್ತು ಗದಗ – ಬೆಟಗೇರು ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024 ಅಂಗೀಕಾರವಾಗಿತ್ತು. ಅನುಮೋದನೆಗಾಗಿ ರಾಜ್ಯಪಾಲರ ಕಚೇರಿಗೆ ಕಳುಹಿಸಲಾಗಿತ್ತು.
ಆದರೆ ಈ ವಿದೇಯಕಗಳನ್ನು ಪಾಸ್ ಮಾಡದೆ, ಸ್ಪಷ್ಟನೆ ಕೋರಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳುಹಿಸಿದ್ದಾರೆ. ಈ ಸಂಬಂಧ ರಾಜ್ಯಪಾಲರ ನಡೆಯಿಂದ ಬೇಸರಗೊಂಡಿರುವ ಸರ್ಕಾರ ಕಾನೂನು ಹೋರಾಟ ಮಾಡಲು ಮುಂದಾಗಿದೆ ಎನ್ನಲಾಗಿದೆ. ಈ ಹಿಂದೆ ಕೂಡ ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದರು. ಇದರಿಂದ ಮಸೂದೆಗಳು ಪಾಸಾಗದೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿತ್ತು. 2024ರ ಜನವರಿಯಿಂದ 2024 ಆಗಸ್ಟ್ ವರೆಗೆ ರಾಜ್ಯಪಾಲರು 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ವಾಪಾಸ್ ಕಳುಹಿಸಿದ್ದರು. ಬಳಿಕ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಸ್ಪಷ್ಟನೆಯನ್ನು ನೀಡಿತ್ತು. ಇದೀಗ ಮತ್ತೆ ನಾಲ್ಕು ಮಸೂದೆಗಳನ್ನು ವಾಪಸ್ ಕಳುಹಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್