Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೂಡ್ಲಿಗಿ ಜನತೆ ಅದೃಷ್ಟವಂತರು: ಸಿ.ಎಂ ಸಿದ್ದರಾಮಯ್ಯ

---Advertisement---

ಕೂಡ್ಲಿಗಿ, ನವೆಂಬರ್, 09: 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.

ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ ಎಂದು ಲೆಕ್ಕ ಮುಂದಿಟ್ಟರು.

ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ.

ಲಜ್ಜೆಗೆಟ್ಟ ಮತಗಳ್ಳರು :

ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ :

FRP ಮತ್ತು MSP ಎರಡನ್ನೂ ನಿಗಧಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ತಿಳಿಸಿದರು.

ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃಧ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದು ಜನತೆಗೆ ಕರೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now