Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಡೆಗೂ ಸಿಕ್ಕ ಸಿಕ್ಕಿಬಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಆಕ್ಸಿಡೆಂಟ್ ಮಾಡಿದ ವ್ಯಕ್ತಿ..!

ಹೆಬ್ಬಾಳ್ಕರ್
---Advertisement---

ಕಳೆದ ಮೂರು ತಿಂಗಳ ಹಿಂದಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಮರಕ್ಕೆ ಡಿಕ್ಕಿ ಹೊಡೆದು ಕಾರು ನಜ್ಜು ಗುಜ್ಜಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಬೆನ್ನಿನ ಮೂಳೆಗೆ ಕೂಡ‌ ಪೆಟ್ಟಾಗಿತ್ತು. ಇದೀಗ ಮೂರು ತಿಂಗಳ ಬಳಿಕ ಕಾರು ಅಪಘಾತ ಮಾಡಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಆಕ್ಸಿಡೆಂಟ್ ಮಾಡಿ ಆರೋಪಿ ಎಸ್ಕೇಪ್ ಆಗಿದ್ದ ಈಗ ಸಿಕ್ಕಿಬಿದ್ದಿದ್ದಾನೆ.

ಅಪಘಾತವಾದ ಬಳಿಕ ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದರು. ಆದರೂ ಸಿಕ್ಕಿರಲಿಲ್ಲ. ಇದೀಗ ಮಹಾರಾಷ್ಟ್ರದ ಪುಣೆಯಲ್ಲಿ ತಗಲಾಕಿಕೊಂಡಿದ್ದಾನೆ. ಪುಣೆ ಜಿಲ್ಲೆಯ ಇಂದಾಪುರದಲ್ಲಿ ಸಿಕ್ಕಿಬಿದ್ದಿದ್ದಾನೆ. ಹಿಟ್ ಅಂಡ್ ರನ್ ಕೇಸಲ್ಲಿ ಲಾರಿ ಚಾಲಕನ ಬಂಧನವಾಗಿದೆ. ಈ ಆರೋಪಿ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಅನ್ನೋದು ತಿಳಿದು ಬಂದಿದೆ. ಇಷ್ಟು ದಿನ ಈತ ತಲೆಮರೆಸಿಕೊಂಡಿದ್ದ. ಪೊಲೀಸರ ತನಿಖೆ ಹೇಗಿತ್ತು ಗೊತ್ತಾ..?

ಜನವರಿ 14 ರಂದು ಬೆಳಗಿನ ಜಾವ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಮಾಡಿ ಲಾರಿ ಚಾಲಕ ಎಸ್ಕೇಪ್ ಆಗಿದ್ದ. ಈ ಸಂಬಂಧ ಕಿತ್ತೂರು ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕ ಶಿವಪ್ರಸಾದ್ ದೂರು ದಾಖಲಿಸಿದ್ದ.‌ ಬಳಿಜ ತನಿಖೆ ಶುರು ಮಾಡಿದ್ದ ಪೊಲೀಸರು, ಸುಮಾರು 69 ಲಾರಿ ಚಾಲಕರನ್ನು ವಿಚಾರಣೆ ಮಾಡಿದ್ದರು. ಪುಣೆ ಮೂಲದ ಮಧುಕರ್ ಸೋಮವಂಶಿಯನ್ನು ತಪಾಸಣೆ ಮಾಡಲಾಗಿತ್ತು. ಆರಂಭದಲ್ಲಿ ನಾನು ಅಪಘಾತ ಮಾಡಿಲ್ಲ ಎಂದು ಹೇಳಿದ್ದ. ಆದರೆ ಪೊಲೀಸರು ಆತನ ಕಾಲ್ ಡಿಟೈಲ್ ಎಲ್ಲಾ ಪರಿಶೀಲನೆ ಮಾಡಿದಾಗ ಆತನೇ ಅಪಘಾತ ಮಾಡಿರುವುದು ತಿಳಿದು ಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment