ಚಿತ್ರದುರ್ಗ: ಬೇಡ ಜಂಗಮ ಸಮುದಾಯದವರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಭಾಗದ ಹುಬ್ಬಳ್ಳಿ ಧಾರವಾಡ ವಿಜಯಪುರ ಹೀಗೆ ವಿವಿಧ ಜಿಲ್ಲೆಗಳಿಂದ ಹೋರಾಟ ನಡೆಸಲು 10 ಬಸ್ ಹಾಗೂ 10 ಕ್ಕೂ ಹೆಚ್ಚು ಕ್ರೂಸರ್ ವಾಹನಗಳಲ್ಲಿ ಹೋರಾಟಗಾರರು ತೆರಳುತ್ತಿದ್ದರು. ಆದರೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೂಯಿಲಾಳು ಟೋಲ್ ಬಳಿಯೇ ಹೋರಾಟಗಾರರನ್ನು ಪೊಲೀಸರು ತಡೆದಿದ್ದಾರೆ.
ರಾತ್ರಿ ವೇಳೆ ಹೋರಾಟಗಾರರು ಬೆಂಗಳೂರು ಕಡೆ ಪ್ರಯಾಣಿಸುವಾಗ ಹೋರಾಟಗಾರರ ವಾಹನಗಳನ್ನು ಪೋಲಿಸರು ತಡೆದ ನಿಲ್ಲಿಸಿದ್ದಾರೆ. ವಾಹನಗಳ ತಡೆದಿದ್ದಕ್ಕೆ ಟೋಲ್ ಮುಂಭಾಗ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ಇತರೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ ಎನ್ನಲಾಗಿದೆ.
ವಾಹನಗಳನ್ನು ಪೋಲಿಸರು ರಸ್ತೆ ಮಧ್ಯದಲ್ಲಿ ತಡೆದು ನಿಲ್ಲಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ವಾಹನದಲ್ಲಿ ತೆರಳುತ್ತಿದ್ದರು. ಹೋರಾಟಗಾರನ್ನು ಬೆಂಗಳೂರಿಗೆ ಹೋಗದಂತೆ ಪೊಲೀಸರು ತಡೆದು ನಿಲ್ಲಿಸಿದ್ದು ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ ಎಂದು ಹೋರಾಟಗಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.