Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜಾಪ್ರಭುತ್ವದ ಉಳಿವಿಗಾಗಿ ಯುವ ಜನರ ಶಕ್ತಿ ಅವಶ್ಯ : ಯಲ್ಲಪ್ಪ ಹೆಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಅ. 11 : ಯುವ ಪರಿವರ್ತನೆ ಯಾತ್ರೆ ಯಾವುದೇ ಪಕ್ಷ, ವ್ಯಕ್ತಿಯ ವಿರುದ್ಧ ಅಲ್ಲ, ಯುವಕರ ಜಾಗೃತಿಗಾಗಿ, ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಈ ಯಾತ್ರೆ ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರು ತಿಳಿಸಿದರು.

ಬೀದರನಿಂದ ಬೆಂಗಳೂರಿನವರೆಗೆ ಯುವ ಪರಿವರ್ತನಾ ಯಾತ್ರೆ ಆರಂಭಿಸಿದ್ದ, ಮುದೋಳ ಯಲ್ಲಪ್ಪ ಹೆಗಡೆ ಹಾಗೂ ದ್ರಾವಿಡ ಸಂಘಟನೆ ಮಂಡ್ಯ ಅಭಿಗೌಡ ಇವರ ನೇತೃತ್ವದಲ್ಲಿ ನಗರದ ಕನಕ ವೃತದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಮೆರವಣಿಗೆಯನ್ನು ನಡೆಸಿ ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿ ಮಾತನಾಡಿದ ಅವರು, ನಮ್ಮ ಈ ಪರಿವರ್ತನೆ ಯಾತ್ರೆ ಯಾವುದೋ ಪಕ್ಷ ವ್ಯಕ್ತಿಯ ವಿರುದ್ಧ ಅಲ್ಲ. ಯುವ ಸಮೂಹ ಪರಿವರ್ತನೆ ಆಗಬೇಕಾಗಿದೆ ಅನೇಕ ಯುವಕರು ದುಷ್ಟಗಳಿಗೆ ಬಲಿಯಾಗುತ್ತಿರುವುದರಿಂದ ಬದಲಾವಣೆ ಕಾಣುತ್ತಿಲ್ಲ. ಪ್ರಜಾಪ್ರಭುತ್ವದ ಉಳಿವಿಗಾಗಿ ಯುವ ಜನರ ಶಕ್ತಿ ಬಹಳ ಅವಶ್ಯಕತೆ ಇದೆ. ಯುವ ಜನರು ಜಾಗೃತ ಆದರೆ ಎಲ್ಲ ರೀತಿಯ ಜಾಗೃತಿ ಮೂಡಿಸಲು ಸಾಧ್ಯ. ಯುವಕರು ರೈತ ಪರ, ಕಾರ್ಮಿಕ ಪರ, ಶೈಕ್ಷಣಿಕ ವಿಚಾರಗಳ ಕಡೆಗೆ ಗಮನ ಹರಿಸಬೇಕಿದೆ. ಹಾಳಾದ ವ್ಯವಸ್ಥೆ ಸರಿಯಾಗ ಬೇಕಾದರೆ ಯುವಕರಿಂದ ಸಾಧ್ಯ ಎಂದರು.

ದ್ರಾವಿಡ ಸಂಘಟನೆಯ ಅಭಿಗೌಡ್ರು ಮಾತನಾಡಿ ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷವನ್ನು ಸರ್ಕಾರದ ಗಮನಕ್ಕೆ ತರಲು ಪಕ್ಷಾತೀತವಾಗಿ ಜಾತಿತವಾಗಿ ಸರ್ವ ಧರ್ಮದ ಸರ್ವರು ಜಿಲ್ಲಾ ಕೇಂದ್ರಗಳಲ್ಲಿ ಜಾತವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ, ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕಿದೆ, ಪ್ರತಿಯೊಂದು ಶಾಲೆಗೆ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ಯುವಕರ ಕನಸು ಸಮಯಕ್ಕೆ ಸರಿಯಾದ ಉದ್ಯೋಗಾವಕಾಶಗಳನ್ನು ರಾಜ್ಯ ಸರ್ಕಾರಕ್ಕೆ ಸರಿಯಾದ ಸಮಯಕ್ಕೆ ಒದಗಿಸಿ ಕೊಡಬೇಕು, ಅಕ್ರಮವಾಗಿ ನಡೆಯುತ್ತಿರುವಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸರ್ಕಾರ ನಿಯಂತ್ರಿಸಬೇಕು, ಕಷ್ಟ ಬಿದ್ದು ಓದಿದಂತಹ ಯುವ ಸಮುದಾಯಕ್ಕೆ ಅನ್ಯಾಯ ಆಗಬಾರದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿ ಸಂಚಾಲಕ ಲಕ್ಷ್ಮಿಕಾಂತ್, ಪತ್ರಕರ್ತರಾದ ಮಾಲತೇಶ್ ಅರಸು, ಹನುಮಂತಪ್ಪ, ಕುರಿ ನಾಗರಾಜ್, ಕುಮಾರಸ್ವಾಮಿ, ಚಿದಾನಂದ, ಸಂದೀಪ್, ನಾಗರಾಜ್, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now