ಬೆಂಗಳೂರು: ಚಿನ್ನದ ದರ ಏರಿಕೆಯಾಗುತ್ತಲೆ ಇದೆ. ಇಂದು ಕೂಡ ಒಂದು ಗ್ರಾಂ ಚಿನ್ನದ ದರ ತುಸು ಹೆಚ್ಚೆ ದರ ಹೆಚ್ಚಳ ಮಾಡಿಕೊಂಡಿದೆ. ಆಭರಣ ಚಿನ್ನ ಹಾಗೂ ಅಪರಂಜಿ ಚಿನ್ನ ಎರಡು ಕೂಡ ದರ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರದ ಮೇಲೆ 70 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,940 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ದರದಲ್ಲಿ 55 ರೂಪಾಯಿ ಏರಿಕೆಯಾಗಿದಗದು, 8,662 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 79,400 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 86,620 ರೂಪಾಯಿ ಆಗಿದೆ.

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 79,400 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 79,550 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 76,400 ರೂಪಾಯಿ ಇದೆ. ಅಮೆರಿಕಾದಲ್ಲಿ 74,740 ಇದೆ. ಸೌದಿಯಲ್ಲಿ 76,100 ಇದೆ.

ಇನ್ನು ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 100.50 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,050 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,050 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,800 ರೂಪಾಯಿ ಇದೆ.


