ನಿನ್ನೆಯಷ್ಟೇ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆ..!

suddionenews
1 Min Read

ಬೆಂಗಳೂರು; ಚಿನ್ನ – ಬೆಳ್ಳಿ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು 22 ಕ್ಯಾರಟ್ ನ ಒಂದು ಗ್ರಾಂಗೆ 95 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,815 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 99 ರೂಪಾಯಿ ಇಳಿಕೆಯಾಗಿದ್ದು, ಈ ಮೂಲಕ 9,617 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 88,150 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 96,170 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 88,150 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 88,300 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 83,500 ರೂಪಾಯಿ ಇದೆ. ಅಮೆರಿಕಾದಲ್ಲಿ 83,430 ಇದೆ. ಸೌದಿಯಲ್ಲಿ 83,690 ಇದೆ.

 

ಬೆಳ್ಳಿ ಬೆಲೆಯಲ್ಲೂ 20 ಪೈಸೆಯಷ್ಟು ಏರಿಕೆಯಾಗಿದೆ. ಹೀಗಾಗಿ ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 110 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,000 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,000 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,000 ರೂಪಾಯಿ ಇದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks