ಬೆಂಗಳೂರು: ನಿನ್ನೆಯಷ್ಟೇ ಏರಿಕೆಯಾಗಿದ್ದ ಚಿನ್ನ ಇಂದು ಮತ್ತೆ ಏರಿಜೆಯತ್ತಲೇ ಸಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 20 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 9,725 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 21 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 10,609 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 97,250 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 1,06,090 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 97,250 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 97,400 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 93,00 ರೂಪಾಯಿ ಇದೆ. ಅಮೆರಿಕಾದಲ್ಲಿ 95,140 ಇದೆ. ಸೌದಿಯಲ್ಲಿ 92,720 ರೂಪಾಯಿ ಇದೆ.
ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಏರಿಕೆಯಾಗಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 126.10 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 12,600 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 12,600 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 13,600 ರೂಪಾಯಿ ಇದೆ.


