ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಹತ್ತು ದಿನ ಬಾಕಿ ಇದೆ. ಭರ್ಜರಿ ಪ್ರಚಾರದಲ್ಲಿ ತೊಡಗಿರುವ ರಾಜಕಾರಣಿಗಳು ಜನರ ಬಳಿ ವಿರೋಧ ಪಕ್ಷಗಳ ವಿರುದ್ಧ ಗುಡುಗುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಹೋಗಿ ಪ್ರಚಾರ ನಡೆಸಲಿದ್ದಾರೆ. ಸದ್ಯ ಕೋಲಾರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕೋಲಾರದ ಜನತೆಗೆ ಕನ್ನಡದಲ್ಲಿಯೇ ಮಾತನಾಡಿಸಿದ ಪ್ರಧಾನಿ ಬಳಿಕ, ಮೇ 13ಕ್ಕೆ ಮತದಾರರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಕ್ಲೀನ್ ಬೋಲ್ಡ್ ಮಾಡಲಿದ್ದಾರೆ. ಇಲ್ಲಿ ಸೇರಿರುವ ಅಪಾರ ಜನರನ್ನು ನೋಡಿದ್ರೆ ಕಾಂಗ್ರೆಸ್, ಜೆಡಿಎಸ್ ನಿದ್ದೆಗೆಡಿಸುವುದು ಗ್ಯಾರಂಟಿ. ಎರಡು ಪಕ್ಷಗಳು ಅಭಿವೃದ್ಧಿಗೆ ಕಂಟಕಪ್ರಾಯವಾಗಿದ್ದವು. ಕರ್ನಾಟಕದ ಜನತೆ ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಕ್ಲೀನ್ ಬೋಲ್ಡ್ ಮಾಡುತ್ತಾರೆ.
ಈ ಚುನಾವಣೆ ಕೇವಲ 5 ವರ್ಷಕ್ಕೆ ಎಂಎಲ್ಎ ಆಯ್ಕೆ ಮಾಡುವ ಚುನಾವಣೆಯಲ್ಲ. 25 ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿಯ ಧಿಕ್ಕನ್ನು ಬದಲಾಯಿಸುವ ಚುನಾವಣೆ. ಕರ್ನಾಟಕದಲ್ಲಿ ಅಸ್ಥಿರ ಸರ್ಕಾರ ಬಂದ್ರೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ ಎಂದಿದ್ದಾರೆ.





GIPHY App Key not set. Please check settings