Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗ್ರಾ.ಪಂ.ಕಾರ್ಯದರ್ಶಿಗಳ ಹೆಗಲಿಗೆ ಜನನ-ಮರಣ ನೋಂದಣಿ ಹೊಣೆ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

---Advertisement---

ಚಿತ್ರದುರ್ಗ.ಜೂನ್.15: ಸರ್ಕಾರ ಗ್ರಾ.ಪಂ. ಕಾರ್ಯದರ್ಶಿಗಳನ್ನು ಜನನ-ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಗ್ರಾ.ಪಂ.ಕಾರ್ಯದರ್ಶಿಗಳ ಹೆಗಲಿಗೆ ಜನನ-ಮರಣ ನೋಂದಣಿ ಹೊಣೆ ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾ.ಪಂ. ಕಾರ್ಯದರ್ಶಿಗಳಿಗೆ ಈ ಕುರಿತು ತರಬೇತಿ ನೀಡಲಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಎಲ್ಲಾ ಗ್ರಾ.ಪಂ. ಕಾರ್ಯಾಲಯಗಳಲ್ಲಿ ಜನನ-ಮರಣ ನೋಂದಣಿ ಮಾಡಲಾಗುವುದು ಎಂದು ಫಲಕ ಅಳವಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ನಾಗರೀಕ ಪದ್ದತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ.ಪಂ.ಕಾರ್ಯದರ್ಶಿಗಳಿಗೆ ಶೀಘ್ರವೇ ಸಾಂಖ್ಯಿಕ ಇಲಾಖೆಯಿಂದ ಡಿಜಿಟಲ್ ಸಹಿ ಮಾದರಿ ಕೀ ನೀಡಲಾಗುವುದು. ಸರ್ಕಾರ ನಿರ್ಧರಿಸುವ ದಿನಾಂಕದಿAದ ಗ್ರಾ.ಪಂ.ಕಾರ್ಯಾಲಯಗಳಲ್ಲಿ ಜನನ-ಮರಣ ನೊಂದಣಿ ಆರಂಭವಾಗಲಿದೆ. ಜನನ ಹಾಗೂ ಮರಣದ ನೋಂದಣಿ ಅತ್ಯಂತ ಮುಖ್ಯವಾದ ಕೆಲಸವಾಗಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ ಕಾರ್ಯ ನಿರ್ವಹಿಸಬೇಕು ಎಂದರು.

ಸಾಂಸ್ಥಿಕ ಜನನ ಹಾಗೂ ಮರಣಗಳ ನೋಂದಣಿಯನ್ನು ತಪ್ಪದೇ ಮಾಡಲಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಮನೆಗಳಲ್ಲಿ ಆಗುವ ಜನನ ಹಾಗೂ ಮರಣಗಳನ್ನು ಸಹ ನೊಂದಣಿ ಮಾಡುವುದು ಕಡ್ಡಾಯವಾಗಿದೆ. ಗ್ರಾಮಲೆಕ್ಕಾಧಿಕಾರಿಗಳು, ಆಶಾ ಕಾರ್ಯಕರ್ತರು ತಪ್ಪದೇ ತಮ್ಮ ವ್ಯಾಪ್ತಿಯಲ್ಲಿನ ಜನನ ಹಾಗೂ ಮರಣ ನೊಂದಣಿ ಮಾಡಲು ಸಹಕಾರ ನೀಡಬೇಕು. ಇನ್ನೂ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆಸ್ಪತ್ರೆಗಳಲ್ಲಿ ಉಂಟಾಗುವ ಜನನ ಹಾಗೂ ಮರಣ ನೋಂದಣಿಯನ್ನು 21 ದಿನಗಳ ಕಾಲವಧಿಯಲ್ಲಿ ಮಾಡಬೇಕು. ನಿರ್ಲಕ್ಷö್ಯ ಹಾಗೂ ತಾಂತ್ರಿಕ ಕಾರಣಗಳನ್ನು ಒಡ್ಡಿ ನೋಂದಣಿ ಮಾಡದೆ ಇರಬಾರದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ 102 ಸರ್ಕಾರಿ ಆಸ್ಪತ್ರೆ ಹಾಗೂ 41 ಖಾಸಿಗಿ ಆಸ್ಪತ್ರೆಗಳು ಸೇರಿ 143 ನೋಂದಣಿ ಘಟಕಗಳಿವೆ. ಜನವರಿ 2024 ರಿಂದ ಮೇ 2024ರ ವರೆಗೆ ಜಿಲ್ಲೆಯಲ್ಲಿ ಒಟ್ಟು 7736 ಜನನ ಪ್ರಮಾಣ 6569 ಮರಣಗಳು ನೋಂದಣಿಯಾಗಿವೆ. ಗ್ರಾಮೀಣ ಭಾಗದಲ್ಲಿ 1167 ಜನನ, 4803 ಮರಣ, ನಗರ ಪ್ರದೇಶದಲ್ಲಿ 6569 ಜನನ 1766 ಮರಣ ನೋಂದಣಿಯಾಗಿವೆ. ಪ್ರತಿ ತಾಲ್ಲೂಕು ಹಂತದಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ನಾಗರೀಕ ನೋಂದಣಿ ಪದ್ದತಿ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿ ರವಿಕುಮಾರ್.ಎನ್ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸೇರಿದಂತೆ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಹಂತದ ಜನನ ಮರಣ ನೊಂದಣಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...