ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 23 ರಂದು ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮತ್ತೆ ಮುಂದೂಡಿಕೆ : ಬಿ.ಟಿ.ಜಗದೀಶ್

1 Min Read

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಅಕ್ಟೋಬರ್. 21 : ಅ. 23 ರಂದು ನಡೆಯಬೇಕಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮಳೆ ಮತ್ತು ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಶಾಶ್ವತ ಹಿಂದುಳಿದ ವರ್ಗಗಗಳ ಕಾಂತರಾಜ್ ನೇತೃತ್ವದ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯದಲ್ಲಿ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆ ಮಾಡಿದ್ದು ಚುನಾವಣೆ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಆಗದೇ ಇರುವ ಕಾರಣ ಹಾಗೂ ನೀತಿ ಸಂಹಿತೆ ಜಾರಿಯಿಂದ ನಮ್ಮ ಸಮಾವೇಶಕ್ಕೂ ಕೆಲವು ಅಡ್ಡಿ ಆತಂಕ ಗಳಿರುವ ಕಾರಣದಿಂದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ದಿನಾಂಕ 23/10/2024 ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿ ಪಡಿಸಿದ ನಂತರ ಎಲ್ಲರ ಗಮನಕ್ಕೆ ತರಲಾಗುವುದು ಎಂದು ಬಿ.ಟಿ. ಜಗದೀಶ್ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *