Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜ ಸುಧಾರಣೆಯಲ್ಲಿ ವಕೀಲರ ಪಾತ್ರ ಅನನ್ಯ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

Facebook
Twitter
Telegram
WhatsApp

 

ಹೊಳಲ್ಕೆರೆ, (ಏ.18) : ಸಮಾಜ ಸುಧಾರಣೆಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಹೇಳಿದರು.

ಪಟ್ಟಣದ ವಕೀಲರ ಸಂಘದ ಭವನದಲ್ಲಿ ಮಂಗಳವಾರ ಮತಪ್ರಚಾರದಲ್ಲಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಹಾಗೂ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ವಕೀಲರು ಸೇವೆ ಮಹತ್ತರವಾಗಿದೆ. ಈ ಹಿಂದೆ
ಸ್ವಾತಂತ್ರ್ಯ ಹೋರಾಟದಲ್ಲಿ ಬಹುತೇಕರು ವಕೀಲರೇ ಮುಂಚೂಣಿಯಲ್ಲಿದ್ದರು.

ಮಹಾತ್ಮಾ ಗಾಂಧಿ, ಜವಾಹರಲಾಲ ನೆಹರು, ಸರ್ದಾರ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ವಕೀಲರ ಹೋರಾಟದ ಫಲ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕು ನಡೆಸಲು ಸಾಧ್ಯವಾಗಿದೆ ಎಂದರು.

ಈ ಹಿಂದೆ ಸಚಿವನಾಗಿದ್ದ ಸಂದರ್ಭ ವಕೀಲರ ಬೇಡಿಕೆಗೆ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಕೀಲರ ಸಂಘಕ್ಕೆ ಆಗಮಿಸಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ವಕೀಲರ ಸಮಸ್ಯೆ ಹೊಳಲ್ಕೆರೆ ಕ್ಷೇತ್ರದ ಅಭಿವೃದ್ಧಿಗೆ ಶೈಕ್ಷಣಿಕ ಪ್ರಗತಿ, ಆರೋಗ್ಯ ಕ್ಷೇತ್ರದ ಸುಧಾರಣೆ, ಆರ್ಥಿಕ ಪ್ರಗತಿ ಸಾಧಿಸುವುದು, ನೀರಾವರಿ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡುವ ಗುರಿ ಹೊಂದಲಾಗಿದೆ ಎಂದರು.

2013ರಲ್ಲಿ ನನ್ನನ್ನು ಹೊಳಲ್ಕೆರೆ ಕ್ಷೇತ್ರದ ಜನತೆ ಚುನಾವಣೆಯಲ್ಲಿ ಆಯ್ಕೆ ಮಾಡಿದ್ದರ ಫಲವಾಗಿ ರಾಜ್ಯದ ಸಮಾಜ ಕಲ್ಯಣ ಇಲಾಖೆ ಸಚಿವನಾದೆ. ಇದರಿಂದ ಹೊಳಲ್ಕೆರೆ ಕ್ಷೇತ್ರದಲ್ಲಿ ವಸತಿ ಶಾಲೆ, ಕಾಲೇಜು, ರಸ್ತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದೆ. ಜನಸಾಮಾನ್ಯರ ಸಮಸ್ಯೆಯನ್ನು ಅರಿತವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ. ಜನರಿಂದ ನಾನು, ನನ್ನಿಂದ ಜನರಲ್ಲ. ಜನರಿಗಾಗಿ ನನ್ನ ಸೇವೆ ಎಂಬ ಭಾವನೆ ನನ್ನಲ್ಲಿದೆ ಎಂದರು.

ವಕೀಲರೊಂದಿಗೆ ಸುಮಾರು ಅರ್ಧತಾಸು ಸಂವಾದ ನಡೆಸಿ ಮಾತನಾಡಿದ ಆಂಜನೇಯ, ವಕೀಲರು ಸಮಾಜಮುಖಿ ಕೆಲಸದಲ್ಲಿ ತೊಡಗಿ ನ್ಯಾಯ ಸಮ್ಮತದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಂತವರ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡುವುದು ಅವಶ್ಯಕವಾಗಿದೆ. ಕ್ಷೇತ್ರದ ಸಮಸ್ಯೆಗಳನ್ನು ಪೂರಕವಾಗಿ ಕೆಲಸ ಮಾಡಲಾಗುವುದು. ಈ ಬಾರಿಯ ಚುನಾವಣೆಯಲ್ಲಿ ನನಗೆ ಅವಕಾಶ ನೀಡಿ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ವಕೀಲ ಮುನೀಶ್ವರಪ್ಪ ಮಾತನಾಡಿ, ಮಾಜಿ ಸಚಿವ ಎಚ್.ಆಂಜನೇಯರವರು ಹೊಳಲ್ಕೆರೆ ಪಟ್ಟಣದಲ್ಲಿ ಹೈಟೆಕ್ ವಕೀಲವರ ಭವನ ನಿರ್ಮಾಣಕ್ಕೆ ರು.2 ಕೋಟಿ ಅನುದಾನ ನೀಡಿದ್ದರು. ಅವರು ಎಲ್ಲರನ್ನೂ ಗೌರವದಿಂದ ಕಾಣುವ ವ್ಯಕ್ತಿ. ಮುಂದಿನ ದಿನಗಳಲ್ಲಿ ಕಾಂಪೌಂಡ್, ಲೈಬ್ರರಿ. ಹಾಗೆಯೇ ವಕೀಲರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಲು ಬದ್ಧರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಲು ವಕೀಲರೆಲ್ಲರೂ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ವಕೀಲ ಪ್ರಭಾಕರ್ ಮಾತನಾಡಿ, ಮಾಜಿ ಸಚಿವ ಎಚ್.ಆಂಜನೇಯ ರಾಜ್ಯದಲ್ಲಿ ದೊಡ್ಡ ದಲಿತ ನಾಯಕ. 2013ರಲ್ಲಿ ಹೊಳಲ್ಕೆರೆ ಕ್ಷೇತ್ರದಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿದ್ದೇವು. ಆಗ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಉತ್ತಮ ಕೆಲಸಗಳನ್ನು ನಿರ್ವಹಿಸಿದ್ದರು. ಅವರ ಅಭಿವೃದ್ಧಿ ಕೆಲಸಗಳು ರಾಜ್ಯಕ್ಕೆ ಮಾದರಿ ಆಗಿದೆ.ಈ ಬಾರಿ ಕ್ಷೇತ್ರದ ಜನರ ಒತ್ತಾಯಕ್ಕೆ ಸ್ಪಂದಿಸಿ ಚುನಾವಣೆ ಸ್ಪರ್ಧಿಸಿದ್ದಾರೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲರ ಇದೆ ಎಂದು ತಿಳಿಸಿದರು.

ವಕೀಲ ಬುರಾನ್ ಬೇಗ್ ಮಾತನಾಡಿ, ಈ ಬಾರಿ  ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಪರ ನಿರೀಕ್ಷೆಗೂ ಮೀರಿ ಜನ ಒಲವು ತೋರುತ್ತಿದ್ದು, ದಾಖಲೆ ಮತಗಳ ಅಂತರದಲ್ಲಿ ಗೆಲುವಿನ ಮುನ್ಸೂಚನೆ ಲಭಿಸಿದೆ. ಕಳೆದ ಬಾರಿ ಆಯ್ಕೆಯಾದಾಗ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇಂತಹ ಧೀಮಂತ ನಾಯಕನನ್ನು ನಾವೆಲ್ಲರೂ ಆರಿಸಿ ಕಳುಹಿಸಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ಆರ್.ಶಿವಕುಮಾರ್, ಜಿಪಂ ಮಾಜಿ ಸದಸ್ಯ ರಂಗಸ್ವಾಮಿ, ವಕೀಲರ ಸಂಘದ ಉಪಾಧ್ಯಕ್ಷ ರಮೇಶ್, ಮಾಜಿ ಅಧ್ಯಕ್ಷ  ಎಸ್.ಮಹಾಲಿಂಗಪ್ಪ, ಹಿರಿಯ ವಕೀಲರಾದ ಜಯಣ್ಣ, ಲೋಕೇಶ್ ನಾಯ್ಕ್, ಸಿದ್ದೇಶ್, ಹನುಮಂತಪ್ಪ, ಪ್ರಭಾಕರ್, ಬಿ.ಎನ್. ಪ್ರಶಾಂತ್, ಮಲ್ಲೇಶ್, ರವಿ, ಜಗದೀಶ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!