ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಇದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು..!
ಚಾಮರಾಜನಗರ: ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆ, ಇದೆ ತಿಂಗಳ 30ರಂದು ಕರ್ನಾಟಕ ತಲುಪಲಿದೆ. ಚಾಮರಾಜನಗರದ ಗುಂಡ್ಲುಪೇಟೆಗೆ ಈ ಯಾತ್ರೆ ಆಗಮಿಸಲಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ ಕೋರಲಾಗಿತ್ತು.
ರಾಹುಲ್ ಗಾಂಧಿಗೆ ಸ್ವಾಗತ ಕೋರುವ ಕಾರಣದಿಂದಾಗಿ ದೊಡ್ಡ ದೊಡ್ಡ ಬ್ಯಾನರ್ ಹಾಕಲಾಗಿತ್ತು. ಆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯ ಫೊಟೋಗಳನ್ನು ಹಾಕಲಾಗಿತ್ತು. ಇದೀಗ ಆ ಬ್ಯಾನರ್ ಗಳನ್ನು ಕಿಡಿಗೇಡಿಗಳು ಅರ್ಧಕ್ಕೆ ಹರಿದು ಹಾಕಿದ್ದಾರೆ.
ಈ ಯಾತ್ರೆ ಕಾಂಗ್ರೆಸ್ ಗೆ ತುಂಬಾನೇ ಮಹತ್ವದ್ದಾಗಿದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಗುಂಡ್ಲುಪೇಟೆಗೆ ಭೇಟಿ ನೀಡಿ ಎಲ್ಲಾ ಸಿದ್ದತೆಗಳನ್ನು ವೀಕ್ಷಿಸಿದ್ದಾರೆ. ಇದರ ನಡುವೆಯೇ ಬ್ಯಾನರ್ ಹರಿದು ಹಾಕಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 30ರಂದು ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಲಿದ್ದು, 21 ದಿನಗಳ ಕಾಲ ಕರ್ನಾಟಕದಲ್ಲಿ ಮುಂದುವರೆಯಲಿದೆ.