ಸುದ್ದಿಒನ್ ವೆಬ್ ಡೆಸ್ಕ್
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಡಿಸೆಂಬರ್ 12 ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.
1995 ರಿಂದ ಗುಜರಾತ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನನುಭವಿಸದ ಭಾರತೀಯ ಜನತಾ ಪಕ್ಷ (ಬಿಜೆಪಿ), 2022 ರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯ ಸ್ಥಾನಗಳೊಂದಿಗೆ 186 ಸ್ಥಾನಗಳ ಪೈಕಿ ಬಿಜೆಪಿ 158ರಲ್ಲಿ ಮುನ್ನಡೆ ಸಾಧಿಸಿದೆ.
ತವರು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿ 30 ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಜೆ 6:30 ರ ಸುಮಾರಿಗೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭಾರಿ ಗೆಲುವಿನ ಕುರಿತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುವ ನಿರೀಕ್ಷೆಯಿದೆ.
ರಾಜ್ಯ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಮೊದಲ ಹಂತದ 89 ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆದಿದೆ.
ಚುನಾವಣೆಯಲ್ಲಿ 64.33 ಶೇಕಡಾ ಮತದಾನವಾಗಿದೆ. 2017 ರಲ್ಲಿ ಹಿಂದಿನ ಅಸೆಂಬ್ಲಿ ಚುನಾವಣೆಗಿಂತ ಸುಮಾರು ಶೇಕಡಾ 4 ರಷ್ಟು ಕಡಿಮೆಯಾಗಿದೆ. ಒಟ್ಟು 4.9 ಕೋಟಿ ನೋಂದಾಯಿತ ಮತದಾರರಲ್ಲಿ, 2022 ರ ಚುನಾವಣೆಯಲ್ಲಿ ಕೇವಲ 3.16 ಕೋಟಿ ಮತದಾನವಾಗಿದೆ.