Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

Facebook
Twitter
Telegram
WhatsApp

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ.

ಮುಖ್ಯವಾಗಿ ರೂ.11.50 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಕೋಟೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಭಾರತೀಯ ಪುರಾತತ್ವ ಇಲಾಖೆ ಅನುಮತಿಯನ್ನು ಶೀಘ್ರ ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಗೆ ಪ್ರತಿ ತಿಂಗಳು 35 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರ ಅಡಿ, ರೂ.75 ಲಕ್ಷದಲ್ಲಿ ಮಕ್ಕಳ ಉದ್ಯಾನವನ, ರೂ.1 ಕೋಟಿ ವೆಚ್ಚದಲ್ಲಿ ಅಕ್ಕ ತಂಗಿಯರ ಹೊಂಡದ ಬಳಿ ನೀರಿನ ಕಾರಂಜಿಗಳನ್ನು ನಿರ್ಮಿಸಲಾಗುವುದು. ಇದರ ಜೊತೆಗೆ ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.
ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.

ಕೆ.ಎಂ.ಇ.ಆರ್.ಸಿ ಅನುದಾನದ ಅಡಿಯಲ್ಲಿಯೇ ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರದಲ್ಲಿ ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು. ಹೊಳಲ್ಕೆರೆ ತಾಲ್ಲೂಕಿನ ದೊಡ್ಡಹೊಟ್ಟೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ, ಬೆಟ್ಟದಲ್ಲಿ ಕಲ್ಯಾಣಿಯ ಪುನರುಜ್ಜೀವನ, ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು.

ವಿ.ವಿ.ಸಾಗರ ಜಲಾಶಯದ ಹಿನ್ನೀರಿನಲ್ಲಿ ಸಾಹಸಮಯ ಜಲಕ್ರೀಡೆ ಆರಂಭಿಸಲು ಸಹ ಯೋಜನೆ ರೂಪಿಸಲಾಗಿದೆ. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ವಾಣಿ ವಿಲಾಸ ಸಾಗರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ, ಇದರೊಂದಿಗೆ ಚಂದ್ರವಳ್ಳಿ ಕೆರೆಯಲ್ಲಿ ಜಲಕ್ರೀಡೆ ಹಾಗೂ ದೋಣಿ ವಿಹಾರಕ್ಕೂ ಯೋಜನೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ 2015 ಅಡಿ ಜಿಲ್ಲೆಯ ಪ್ರಮುಖ ಹೋಟೆಲ್‍ಗಳ ನೊಂದಣಿ ಕಡ್ಡಾಯವಾಗಿ ಮಾಡಬೇಕು. ಇದರಿಂದ ಜಿಲ್ಲೆಗೆ ಭೇಟಿ ನೀಡಿದ ಹೊರ ದೇಶ ಹಾಗೂ ಹೊರ ರಾಜ್ಯದ ಪ್ರವಾಸಿಗರ ಮಾಹಿತಿ ಲಭ್ಯವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಯಾತ್ರಿ ನಿವಾಸಗಳು ಸಾರ್ವಜನಿಕರ ಬಳಕೆ ಒದಗುವಂತಾಗಬೇಕು. ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ, ನಿರ್ವಹಣೆ ಜವಬ್ದಾರಿ ವಹಿಸುವಂತೆ ಹೇಳಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಕಿರುಹೊತ್ತಿಗೆ ಮುದ್ರಿಸಬೇಕು. ಇದರಲ್ಲಿ ಕೇಂದ್ರ, ರಾಜ್ಯ ಹಾಗೂ ಪ್ರವಾಸೊದ್ಯಮ ಇಲಾಖೆಯಿಂದ ನಿರ್ವಹಿಸುತ್ತಿರುವ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಇರಬೇಕು ಎಂದರು.

ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರರುಗಳಾದ ಡಾ.ನಾಗವೇಣಿ, ಪಾತೀಮ ಬಿಬಿ, ತಿರುಪತಿ ಪಾಟೀಲ್, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಶಿಕುಮಾರ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೊಬೈಲ್ ನಲ್ಲಿ Cashexpand-U ಅಪ್ಲಿಕೇಷನ್ ಇದ್ದರೆ ಕೂಡಲೇ ಡಿಲೀಟ್ ಮಾಡಿ : ಸರ್ಕಾರದಿಂದ ಎಚ್ಚರಿಕೆಯ ಸಂದೇಶ..!

ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಸಿಕ್ಕಾಪಟ್ಟೆ ಜಾಸ್ತಿಯಾಗ್ತಾ ಇದೆ. ಒಂದು ಸೆಕೆಂಡ್ ಯಾಮಾರಿದರು ಅಕೌಂಟ್ ನಲ್ಲಿ ಇರುವ ಹಣ ಪಕ್ಕನೇ ಮಾಯವಾಗಿ ಬಿಡುತ್ತದೆ. ಸೈಬರ್ ಕ್ರೈಂಗೆ ದೂರು ನೀಡಿದರು ಆ ಹಣ ಮರಳಿ

Dengue fever : ಡೆಂಗ್ಯೂ ಜ್ವರ ಇದ್ದರೆ, ನೀವು ಯಾವ ಹಣ್ಣುಗಳನ್ನು ತಿನ್ನಬೇಕು ? ಎಳ ನೀರು ಒಳ್ಳೆಯದೇ ?

  ಸುದ್ದಿಒನ್ : ಮಳೆಗಾಲ ರೋಗಗಳ ಕಾಲ. ಮಳೆಗಾಲದಲ್ಲಿ ಡೆಂಗ್ಯೂ ಭೀತಿ ಹೆಚ್ಚು. ಮಳೆಗಾಲದಲ್ಲಿ ಹಲವೆಡೆ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಈ ಸೊಳ್ಳೆಗಳು ಮಲೇರಿಯಾ, ಚಿಕೂನ್‌ಗುನ್ಯಾ, ಡೆಂಗ್ಯೂ ಮುಂತಾದ ಅಪಾಯಕಾರಿ ರೋಗಗಳನ್ನು

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ. ಭಾನುವಾರ- ರಾಶಿ ಭವಿಷ್ಯ ಜುಲೈ-7,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

error: Content is protected !!