Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನೇರಿ ಮಠದ ಶ್ರೀಗಳು ಕ್ಷಮೆಯಾಚಿಸಲಿ : ಜಾಗತಿಕ ಲಿಂಗಾಯತ ಮಹಾಸಭಾ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಬೀರೂರು ಗ್ರಾಮದ ಬಸವ ಪರಂಪರೆಯ ವಿರಕ್ತಮಠದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಲಿಪುರ ಸಮೀಪದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರಸ್ವಾಮಿ ಕರ್ನಾಟಕದ ಲಿಂಗಾಯಿತ ಮಠಾಧೀಶರ ಒಕ್ಕೂಟದ ಪೂಜ್ಯರ ಕುರಿತು ಮಾನಹಾನಿಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಜಾಗತಿಕ ಲಿಂಗಾಯತ ಮಹಾಸಭಾದಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.

ಕನೇರಿಸ್ವಾಮಿ ಲಿಂಗಾಯಿತ ಮಠಾಧೀಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಾಂವಿಧಾನಿಕ ಪದಗಳನ್ನು ಬಳಸಿರುವುದು ಸರಿಯಲ್ಲ. ಪ್ರತಿಷ್ಟಿತ ಒಕ್ಕೂಟದ ಮಠಾಧೀಶರನ್ನು ಹೆದರಿಸುವ ಕೀಳು ವ್ಯಕ್ತಿತ್ವವನ್ನು ಪ್ರದರ್ಶಿಸಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ಸಹಿಷ್ಣುತೆಗೆ ಹಾಗೂ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುತ್ತದೆ. ಹಾಗಾಗಿ ಕೂಡಲೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.
ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಡಿ.ಕೆಂಚವೀರಪ್ಪ, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಟಿ.ಮಲ್ಲೇಶ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾಬಾಬು, ಪಾರ್ವತಮ್ಮ, ಪ್ರಧಾನ ಕಾರ್ಯದರ್ಶಿ ಎಂ.ರಂಗನಾಥ್, ಬಸವರಾಜ್‍ಕಟ್ಟಿ, ಮಂಜು, ಚಂದ್ರಶೇಖರ್, ನಾಗರಾಜು, ವಾಗೀಶ್‍ಬಾಬು, ಕೆ.ಇ.ಬಿ.ಷಣ್ಮುಖಪ್ಪ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now