ಬೆಂಗಳೂರು ಅ 31: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.
ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಮೈಸೂರಿನ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡೀ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿದೆ, ಗೌರವಿಸಿದೆ.
ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, “ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು” ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















