Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃಧ್ದಿಗೆ ಹೆಚ್ಚು ಒತ್ತು ನೀಡುತ್ತಿದೆ : ಶಾಸಕ ಟಿ. ರಘುಮೂರ್ತಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ, ಅಕ್ಟೋಬರ್.06 : ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃಧ್ದಿಗೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಹೇಳಿದರು.

ಸಮೀಪದ ಬೆಳಗೆರೆ ಗ್ರಾಮದ ಹೊರವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತು ಯುವಕರ ಮನವಿಯಂತೆ ಶಾಲೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಮ್ಮ ಸರ್ಕಾರ ಹಳ್ಳಿಗಾಡಿನ ಶಾಲೆಗಳ ಸಮಗ್ರ ಅಭಿವೃಧ್ದಿಗೆ ಹೆಚ್ಚು ಒತ್ತುನೀಡಿ ಮಕ್ಕಳ ಕಲಿಕೆಯನ್ನು ಉತ್ತಮಪಡಿಸಲು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕೂಡಲೇ ಈ ಶಾಲೆಗೆ ಅಗತ್ಯವಾಗಿ ಬೇಕಾದ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸಿ ಈ ಭಾಗದ ಶಾಲೆಗಳನ್ನು ವಿಲೀನಗೊಳಿಸಿ ಪಬ್ಲಿಕ್‌ಸ್ಕೂಲ್ ಆರಂಭಿಸಲು ಯೋಜಿಸಲಾಗುವುದು ಎಂದರು .

ಶಾಲಾ ಸಮಿತಿಯ ಅಧ್ಯಕ್ಷ ಶಾಂತಪ್ಪ ಮಾತನಾಡಿ, ಈಗಿರುವ ಕೊಠಡಿಗಳು ಮಕ್ಕಳಿಗೆ ಮಾರ್ಗದರ್ಶನ ನೀಡಲು ಸಾಕಾಗುವುದಿಲ್ಲ. ಕೂಡಲೇ ಈ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲು ಹಣಕಾಸಿನ ಮಂಜೂರಾತಿ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಲಿತಮ್ಮ ತಿಪ್ಪೇಸ್ವಾಮಿ, ಗ್ರಾಪಂ ಉಪಾಧ್ಯಕ್ಷೆ ರೂಪಾ, ತಹಸೀಲ್ದಾರ್ ರೆಹಾನ್‌ಪಾಷಾ,  ಬಿಇಒ ಕೆ ಎಸ್ ಸುರೇಶ, ಗ್ರಾಪಂ ಸದಸ್ಯರಾದ ರಂಗಸ್ವಾಮಿ, ನಿಜಲಿಂಗಪ್ಪ, ಶಿವಮ್ಮ, ವಿಶಾಲಾಕ್ಷಿ, ಮಂಜುನಾಥ, ವೀರೇಶ, ವೆಂಕಟರಮಣ, ಜಯಣ್ಣ, ರಂಗಸ್ವಾಮಿ, ನಾಗಾರ್ಜುನ್, ಶಿವಣ್ಣ, ಗ್ರಾಮದ ಶಾಲಾ ಮುಖ್ಯಶಿಕ್ಷಕಿ ಸುಜಾತಾ, ಶಾಲಾ ಸಿಬ್ಬಂದಿ ಗ್ರಾಮದ ಯುವಕ ಸಂಘಗಳ ಪದಾಧಿಕಾರಿಗಳು ಶಾಲಾ ಸಮಿತಿಯವರು  ಗ್ರಾಮಸ್ಥರು ಇದ್ದರು.

ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸಹಕಾರ ಮಾಡುವುದಾಗಿ ಭರವಸೆ ನೀಡಿದ ಶಾಸಕರಿಗೆ ಶಾಲಾ ಅಭಿವೃದ್ಧಿ ಸಮಿತಿ ಗ್ರಾಮಸ್ಥರು ಸನ್ಮಾನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!