Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಮನೆಗೆ ಬೀಗ ಜಡಿದ ತಹಶಿಲ್ದಾರ್..!

---Advertisement---

 

ಬಿಗ್ ಬಾಸ್ ಕಾರ್ಯಕ್ರಮದ ಜಾಲಿವುಡ್ ಸ್ಟುಡಿಯೋಸ್ ಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರೋ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಜಡಿಯಲಾಗಿದೆ. ಪರಿಸರ ನಿಯಮ ಉಲ್ಲಂಘನೆಯಡಿ ಬೀಗ ಹಾಕಿದ್ದು, ರಾಮನಗರ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ಬೀಗ ಹಾಕಲಾಗಿದೆ.

ಈ ಮೂಲಕ ಬಿಗ್ ಬಾಸ್ ಶೋ ಬಂದ್ ಆಗುವ ಸೂಚನೆ ಸಿಕ್ತಾ ಇದೆ. ಆದರೆ ಈ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ನೊಳಗಡೆಯೇ ಬಿಗ್ ಬಾಸ್ ಶೋ ಶೂಟಿಂಗ್ ನಡೆಯುತ್ತಿದೆ. ಹೀಗಾಗಿ ಬಿಗ್ ಬಾಸ್ ಶೋ ಶೂಟಿಂಗ್ ಸ್ಥಗಿತಕ್ಕೂ ಸೂಚನೆ ನೀಡಲಾಗಿದೆ. ಜಾಲಿವುಡ್ ಸ್ಟುಡಿಯೋನ ಮೇನ್ ಗೇಟ್‌ ಗೆ ಬೀಗ ಜಡಿದು ಸೀಲ್ ಮಾಡಲಾಗಿದೆ.

ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಮಾಲಿನ್ಯ ನಿಯಂತ್ರಣ ಮಂಡಳಿಯು ಕಳೆದ ವರ್ಷ ಕೊಟ್ಟಿದ್ದ ನೋಟೀಸ್ ಗಳನ್ನು ತೀವ್ರವಾಗಿ ನಿರ್ಲಕ್ಷಿಸಿತ್ತು. ಹಸಿ ಕಸ, ಒಣ ಕಸವನ್ನು ಬೇರ್ಪಡಿಸುತ್ತಿರಲಿಲ್ಲ. ಜೊತೆಗೆ ನೀರನ್ನು ಕೂಡ ಶುದ್ದೀಕರಣ ಮಾಡುತ್ತಿರಲಿಲ್ಲ. ಈ ಬಗ್ಗೆ ಅನೇಕ ಭಾರಿ ನೋಟೀಸ್ ಕೊಟ್ಟರೂ ಜಾಲಿವುಡ್ ಸ್ಟುಡಿಯೋ ಅಂಡ್ ಅಡ್ವೆಂಚರ್ಸ್ ಡೋಂಟ್ ಕೇರ್ ಸ್ವಭಾವ ಪ್ರದರ್ಶಿಸಿದ್ದರು. ಇದರಿಂದಾಗಿ ನಿನ್ನೆ ಮತ್ತೊಮ್ಮೆ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ ಜಡಿಯಲು ಮಾಲಿನ್ಯ ನಿಯಂತ್ರಣ ಮಾಡಲು ಆದೇಶ ಹೊರಡಿಸಿತ್ತು . ಆ ಆದೇಶವನ್ನು ಇಂದು ಪೊಲೀಸ್ ಭದ್ರತೆ ಪಡೆದು ರಾಮನಗರ ತಹಸೀಲ್ದಾರ್ , ಕಂದಾಯ ಇಲಾಖೆ ಅಧಿಕಾರಿಗಳು ಜಾರಿಗೊಳಿಸಿದ್ದಾರೆ.

 

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಬಿಗ್ ಬಾಸ್ ಸಂಬಂಧಿಸಿದವರಿಗೆ ನೋಟೀಸ್ ನೀಡಿದೆ. ತ್ಯಾಜ್ಯ ವಿಲೇವಾರಿ ಹಾಗೂ ಎಸ್ಟಿಪಿ ನೀರು ಸೂಕ್ತ ನಿರ್ವಹಣೆ ಆಗ್ತಿಲ್ಲ ಎಂದು ನೋಟೀಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಸಂಬಂಧ ರಾಮನಗರ ಡಿಸಿ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ KSPCB ಈ ಮೊದಲೇ ಎಚ್ಚರಿಕೆಯನ್ನು ನೀಡಿತ್ತು. ನೀರು ಹಾಗೂ ಕರೆಂಟ್ ಕಟ್ ಮಾಡುವಂತೆ ಒಂದು ತಿಂಗಳ ಹಿಂದೆಯೇ ಸೂಚನೆ ನೀಡಿತ್ತು. ಆದರೂ ವೇಲ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಎಚ್ಚೆತ್ತುಕೊಂಡಿರಲಿಲ್ಲ.‌ ಇದೀಗ ಮತ್ತೆ ನೋಟೀಸ್ ನಿಡೀದೆ. ಈ ಕಡೆ ಪ್ರತಿಭಟನೆಯೂ ನಡೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now