ಸುದ್ದಿಒನ್, ಹಿರಿಯೂರು, ಫೆಬ್ರವರಿ.03 : 7ನೇ ವೇತನ ಆಯೋಗದ ವರದಿಯನ್ನು ಶೀಘ್ರ ಯಾಥಾವತ್ತಾಗಿ ಅನುಷ್ಠಾನಗೊಳಿಸಿ ಹಾಗೂ ಎನ್‌ಪಿಎಸ್ ಬದಲು ಓಪಿಎಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಎನ್‌ಪಿಎಸ್ ಯೋಜನೆಯು ಸರ್ಕಾರಿ ನೌಕರರಿಗೆ ಮರಣ ಶಾಸನವಾಗಿದ್ದು ಇದನ್ನು ಕೂಡಲೇ ರದ್ದುಗೊಳಿಸಿ ಓಪಿಎಸ್ ಯೋಜನೆಯನ್ನು ಮರು ಜಾರಿ ಮಾಡಬೇಕು, ಜೊತೆಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಇದಲ್ಲದೆ ನೌಕರರ ಇತರೇ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ಆಗ್ರಹಿಸಿದರು.
ನೌಕರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರಾಜ್ಯ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವ ಡಿ ಸುಧಾಕರ್ ಅವರು ಭರವಸೆ ನೀಡಿದರು.
ಆರ್. ಶಿವಕುಮಾರ್, ತಾಲ್ಲೂಕು ಅಧ್ಯಕ್ಷ
7ನೇ ವೇತನ ಆಯೋಗದ ವರದಿಯ ಅವಧಿ ಹೆಚ್ಚುತ್ತಾ ಹೋಗುತ್ತಿದೆ. ಇದರಿಂದ ಸರ್ಕಾರಿ ನೌಕರರ ಬೇಡಿಕೆಗಳಿಗೆ ಬೆಲೆ ಇಲ್ಲದಂತಾಗಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಕೂಡಲೇ ಸರ್ಕಾರ ಶೀಘ್ರವಾಗಿ ವರದಿ ಪಡೆದುಕೊಂಡು ಎನ್‌ಪಿಎಸ್ ಬದಲಿಗೆ ಓಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರ ಕನಸು ನನಸು ಮಾಡಲು ಮುಂದಾಗಬೇಕೆಂದು ಸರ್ಕಾರವನ್ನು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಶಿವಕುಮಾರ್
ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ನೌಕರರ ಸಂಘದ ಖಜಾಂಚಿ ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಬಿ. ರಮೇಶ್, ರಾಜ್ಯ ಪರಿಷತ್ ಸದಸ್ಯೆ ಎಚ್ ಎಂ. ಯಶೋಧ, ಸೋಮಶೇಖರ್, ಜಿಎಸ್ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಅಧ್ಯಕ್ಷ ನಾಗನಾಯ್ಕ, ತಿಪ್ಪೇಸ್ವಾಮಿ, ವಿದ್ಯಾಧರ, ಕೆಂಪಣ್ಣ, ಅಶೋಕ್, ರಂಗಸ್ವಾಮಿ, ಲೋಕಮ್ಮ, ರಮೇಶ್ ನಾಯ್ಕ, ವಿನಯ್ ಕುಮಾರ್, ರವಿಕುಮಾರ್, ರಂಗಸ್ವಾಮಿ, ಮಂಜುನಾಥ್, ರಮೇಶ್, ಪ್ರೇಮಲತಾ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…