Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ : ಮಹಿಳಾ ಪೊಲೀಸ್ ಅಧಿಕಾರಿಯ ಚಿನ್ನದ ಸರ ಕಳ್ಳತನ..!

---Advertisement---

ಶಿವಮೊಗ್ಗ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ನರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವುದಕ್ಕೂ ಯತ್ನಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಮಹಿಳಾ ಪೊಲೀಸ್ ಅಧಿಕಾರಿಯ ಚಿನ್ನದ ಸರ ಕಳ್ಳತನವಾಗಿರುವ ಘಟನೆ ನಡೆದಿದೆ.

ಪ್ರತಿಭಟನೆ ಜೋರಾಗುತ್ತಲೇ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟವೂ ಹೆಚ್ಚಾಗಿದೆ. ಈ ತಳ್ಳಾಟ ನೂಕಾಟದಲ್ಲಿ ಎಎಸ್ಐ ಅಮೃತಬಾಯಿ ಅವರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನೇ ಎಗರಿಸಿದ್ದಾರೆ. ಅಮೃತಬಾಯಿ, ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಳ್ಳತನವಾಗಿರುವ ಅಮೃತಬಾಯಿ ಅವರ ಸರ ಸುಮಾರು, 60 ಗ್ರಾಂ ತೂಕವಿದ್ದು, ಸುಮಾರು 8 ಲಕ್ಷ ರೂಪಾಯಿ ಬೆಲೆ ಬಾಳುತ್ತಿತ್ತು. ಸರ ಕಳ್ಳತನವಾಗಿದೆ ಎಂದು ತಿಳಿಯುತ್ತಿದ್ದಂತೆ ಆ ಮಹಿಳಾ ಪೊಲೀಸ್ ಅಧಿಕಾರಿ ಕಣ್ಣೀರಾಕಿದ್ದಾರೆ‌. ಈ ಘಟನೆಯಿಂದ ಪೊಲೀಸರಿಗೆ ಕೊಂಚ ಮುಜುಗರವೂ ಆಗಿದೆ. ಯಾಕಂದ್ರೆ ಎಂತ ಜನಜಂಗುಳಿಯೇ ಇರಲಿ. ಅಲ್ಲಿ ಏನು ಅಹಿತಕರ ಘಟನೆ ನಡೆಯದಂತೆ, ಕಳ್ಳತನಗಳು ಆಗದಂತೆ ಎಚ್ಚರಿಕೆ ವಹಿಸುವುದು ಇದೇ ಪೊಲೀಸರು. ಆದರೆ ಈಗ ನೋಡಿದ್ರೆ ಪೊಲೀಸ್ ಅಧಿಕಾರಿಯ ಕೊರಳಲ್ಲಿರೋ ಮಾಂಗಲ್ಯವೇ ಕಳ್ಳತನವಾಗಿದೆ. ಆ ಕಳ್ಳ ಇನ್ನೆಂಥ ಚಾಲಾಕಿ ಇರಬೇಡ, ಇನ್ನೆಷ್ಟೊ ಮೊಂಡ ಧೈರ್ಯ ಮಾಡಿರಬಹುದು ಎಂಬ ಪ್ರಶ್ನೆಗಳು ಎಲ್ಲರನ್ನು ಕಾಡುತ್ತಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now