ರಾಮನಗರ: ನಿಖಿಲ್ ಕುಮಾರಸ್ವಾಮಿ ಇತ್ತೀಚೆಗೆ ರಾಜಕಾರಣದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಕಾರ್ಯಕರ್ತರ ಜೊತೆಗೆ ಓಡಾಡುತ್ತಾ, ಪಕ್ಷ ಬಲವರ್ಧನೆ ಮಾಡುವತ್ತ ಗಮನ ಹರಿಸಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ, ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ರೈತರ ಪರವಾಗಿ ಮಾತನಾಡಿದರು. ಸರ್ಕಾರ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೆ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮಾಡ್ತೇವೆ. ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಹರಿಹಾಯ್ದಿರುವ ನಿಖಿಲ್ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚು ಭೂಮಿಯನ್ನು ಕಸಿದುಕೊಳ್ಳುವುದಕ್ಕೆ ನಾವೂ ಬಿಡುವುದಿಲ್ಲ. ರೈತರ ಮುಂದೆ ತೊಡೆ ತಟ್ಟುವ ಉಪ ಮುಖ್ಯಮಂತ್ರಿಗಳೇ ನಿಮ್ಮ ತೊಡೆ ಮುರಿಯುವ ಕಾಲ ದೂರ ಇಲ್ಲ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದೂ ಗೊತ್ತು, ತೊಡೆ ಮುರಿಯುವುದೂ ಗೊತ್ತು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಶೇಕಡ 80 ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ. ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















