ಯಾದಗಿರಿ: ಕಾಂಗ್ರೆಸ್ ಪಕ್ಷದಿಂದ ಈಗ ಮತ್ತೊಂದು ಅಭಿಯಾನ ಶುರುವಾಗಿದೆ. PayCM ಆದ ಮೇಲೆ SayCM ಅಭಿಯಾನ ಶುರುವಾಗಿದೆ. ಈ ಅಭಿಯಾನದ ಮೂಲಕ ಸಿಎಂ ಬೊಮ್ಮಾಯಿ ಅವರಿಗೆ ಪ್ರಶ್ನೆಗಳನ್ನ ಸುರಿಸಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೆಲಸ ಇಲ್ಲದವರು ಮಾಡುತ್ತಿದ್ದಾರೆ ಎಂದಿದ್ದಾರೆ.

ನಮಗೆ ಜವಬ್ದಾರಿ ಇದೆ, ಜನಪರ ಕಾಳಜಿ ಇದೆ. ನಾವೂ ನಮ್ಮ ಕೆಲಸಗಳನ್ನು ಮಾಡುವ ಮೂಲಕ ಮಾತನಾಡುತ್ತೇವೆ. ಮಾತನಾಡುವುದಕ್ಕಿಂತ ಹೆಚ್ಚು ಜನಪರ ಕೆಲಸಗಳನ್ನು ಮಾಡುತ್ತೇವೆ. ರಾಹುಲ್ ಗಾಂಧಿ ಅವರ ಪಕ್ಷ ಅಧಿಕಾರದಲ್ಲಿದ್ದಾಗ ನಡೆದ ಹಗರಣಗಳ ಬಗ್ಗೆ ಕಣ್ಣು ತೆರೆದು ನೋಡಲಿ. ಅವರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣಾ ಎಂದಿದ್ದಾರೆ.



