Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿತ್ತೂರು ರಾಣಿ ಚೆನ್ನಮ್ಮ ಧೀರತನ ಇಂದಿಗೂ ಪ್ರೇರಣೆ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

---Advertisement---

ಚಿತ್ರದುರ್ಗ. ಅ.23:  1857ರ ಸಿಪಾಯಿ ದಂಗೆಗಿಂತಲೂ ಮೊದಲೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯದ ಕಹಳೆ ಊದಿ, ನಾಡಿನ ರಕ್ಷಣೆಗಾಗಿ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ ಮತ್ತು ಸಾಹಸ ಪ್ರತಿಯೊಬ್ಬರಿಗೂ ಹಾಗೂ ವಿಶೇಷವಾಗಿ ಈ ನೆಲದ ಹೆಣ್ಣುಮಕ್ಕಳಿಗೆ ಸ್ವಾವಲಂಬನೆ ಮತ್ತು ದೇಶದಪ್ರೇಮದ ದೊಡ್ಡ ಪ್ರೇರಣೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬ್ರಿಟಿಷರ ವಿರುದ್ಧ ಧೀರತನದಿಂದ ಹೋರಾಡಿದ ಚೆನ್ನಮ್ಮನವರು, ತಮ್ಮ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನಂತಹ ವೀರರನ್ನು ಉರಿದುಂಬಿಸಿ ನಾಡು-ನುಡಿಯನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆನ್ನಮ್ಮನವರ ಶೌರ್ಯ ಸ್ಮರಿಸುವ ನಿಟ್ಟಿನಲ್ಲಿ ‘ಕಿತ್ತೂರು ಉತ್ಸವ’ ಅತ್ಯಂತ ಪ್ರಸಿದ್ಧಿ ಪಡೆದುಕೊಂಡಿದೆ ಎಂದರು.

ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ಸಮುದಾಯಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮತ್ತಷ್ಟು ವಿಜೃಂಭಣೆಯಿಂದ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಕಾರ್ಮಿಕ ಅಧಿಕಾರಿ ಅನಿಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಮುಖಂಡರಾದ ಮಹಡಿ ಶಿವಮೂರ್ತಿ, ಜೀತೇಂದ್ರ, ಮೋಕ್ಷಾ ರುದ್ರಸ್ವಾಮಿ, ರೀನಾ ವೀರಭದ್ರಪ್ಪ, ಉಷಾ, ಗಜೇಂದ್ರ, ಚಿನ್ಮಯಾನಂದ, ಕೆಪಿಎಂ ಗಣೇಶಯ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now