ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಇನ್ನು ನಿಂತಿಲ್ಲ : ಬಿ.ಕೆ.ರಹಮತ್‍ವುಲ್ಲಾ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲಿ ಅನೇಕ ಮಹಿಳೆಯರು ಇದ್ದಾರೆ. ಹಾಗಾಗಿ ಹೆಣ್ಣು ಅಬಲೆಯಲ್ಲ. ಸಬಲೆ ಎಂದು ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪುರಾತನ ಕಾಲದಿಂದಲೂ ಹೆಣ್ಣನ್ನು ಅಬಲೆ ಎಂದು ಬಿಂಬಿಸುತ್ತಲೆ ಬರಲಾಗುತ್ತಿದೆ. ಫಾತಿಮಶೇಖ್, ಕಿತ್ತೂರುರಾಣಿ ಚೆನ್ನಮ್ಮ, ಒನಕೆ ಓಬವ್ವ, ಸಾವಿತ್ರಿಬಾಯಿಪುಲೆ ಇವರುಗಳೆಲ್ಲಾ ದಿಟ್ಟ ಮಹಿಳೆಯರು. ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಇನ್ನು ನಿಂತಿಲ್ಲ. ಗರ್ಭದಲ್ಲಿರುವಾಗಲೆ ಹೆಣ್ಣಿನ ಭ್ರೂಣ ಹತ್ಯೆಯಾಗುತ್ತಿದೆ. ಹೆಣ್ಣು ಮನೆಗೆ ಮಾತ್ರ ಸೀಮಿತ ಎನ್ನುವ ತಪ್ಪು ಕಲ್ಪನೆಯನ್ನು ಮನಸ್ಸಿನಿಂದ ತೆಗೆದು ಹಾಕಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಬಡತವನ್ನು ಮುಂದಿಟ್ಟುಕೊಂಡು ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಡಿ. ಕಡ್ಡಾಯವಾಗಿ ಶಿಕ್ಷಣ ಕೊಡಿಸಿದಾಗ ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗುತ್ತದೆಂದರು.

 

ಬಾಲ್ಯ ವಿವಾಹ ಅಕ್ಷಮ್ಯ ಅಪರಾಧ. ಹೆಣ್ಣಿಗೆ ಹದಿನೆಂಟು ವರ್ಷ, ಗಂಡಿಗೆ 21 ವರ್ಷಗಳಾಗಿದ್ದಾಗ ಮಾತ್ರ ವಿವಾಹ ಮಾಡಬಹುದು. ಅಪ್ರಾಪ್ತ ವಯಸ್ಸಿನಲ್ಲಿ ವಿವಾಹ ಮಾಡಿದರೆ ಪೋಷಕರಿಗೂ ಶಿಕ್ಷೆಯಾಗುತ್ತದೆನ್ನುವ ಅರಿವಿರಬೇಕೆಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ ಮಹಿಳೆಯರು ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ನ್ಯೂಯಾರ್ಕ್‍ನಲ್ಲಿ ಚಳುವಳಿ ನಡೆಸಿದ ಫಲವಾಗಿ ಪ್ರತಿ ವರ್ಷವೂ ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕುಟುಂಬ ನಿರ್ವಹಣೆ ಜೊತೆ ಮಹಿಳೆ ಹೊರಗಡೆಯೂ ಕೆಲಸ ಮಾಡುತ್ತಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿಯೂ ಮಹಿಳೆ ಸಾಧನೆ ಮಾಡುತ್ತಿದ್ದಾಳೆ. ರಾಜಕಾರಣಿಗಳಾಗಿ, ಅಧಿಕಾರಿಗಳಾಗಿ, ಹೋರಾಟಗಾರ್ತಿಯರಾಗಿಯೂ ಮಹಿಳೆ ಗುರುತಿಸಿಕೊಳ್ಳುತ್ತಿರುವುದರಿಂದ ಹೆಣ್ಣು ಅಬಲೆಯಲ್ಲ. ಸಬಲೆ ಎನ್ನುವುದು ಗೊತ್ತಾಗುತ್ತದೆ ಎಂದರು.

ತಾಯಿ ಗರ್ಭದಲ್ಲಿಯೇ ಹೆಣ್ಣಿನ ಭ್ರೂಣ ಹತ್ಯೆಯಾಗುತ್ತಿರುವುದು ನೋವಿನ ಸಂಗತಿ. ಶ್ರೀಮಂತಿಕೆಯಿಂದ ಯಾರೂ ಸಾಧನೆ ಮಾಡಲು ಆಗುವುದಿಲ್ಲ. ಶಿಕ್ಷಣದಿಂದ ಮಾತ್ರ ಸ್ವಾವಲಂಭಿಯಾಗಿ ಬದುಕಬಹುದು. ಹೆಣ್ಣು-ಗಂಡೆಂಬ ತಾರತಮ್ಯವಿಲ್ಲದೆ ಹೆಣ್ಣಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ಪೋಷಕರುಗಳ ಮೇಲಿದೆ. ಬಾಲ್ಯ ವಿವಾಹ ಮಾಡಿದರೆ ಹೆತ್ತವರಿಗೂ ಶಿಕ್ಷೆಯಾಗುತ್ತದೆಂಬ ಎಚ್ಚರಿಕೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಮಕ್ಕಳನ್ನು ಮೊಬೈಲ್‍ನಿಂದ ದೂರವಿರಿಸಿ. ಒಂದು ವೇಳೆ ಮೊಬೈಲ್ ಕೊಟ್ಟರು ಅವರ ಚಲನವಲನಗಳ ಕಡೆ ಪೋಷಕರು ನಿಗಾ ವಹಿಸಬೇಕು. ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಂದ ಮಹಿಳೆಯ ಸಬಲೀಕರಣವಾಗುತ್ತಿದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡಲಾಗುವುದು. ಯಾವುದೇ ಮಹಿಳೆಗೆ ತೊಂದರೆಯಾಗುತ್ತಿದ್ದಾರೆ. 181 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ಸಹಾಯಕ್ಕೆ ಧಾವಿಸಲಾಗುವುದು ಎಂದು ಹೇಳಿದರು.

ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಮೋಕ್ಷರುದ್ರಸ್ವಾಮಿ ಮಾತನಾಡುತ್ತ ಹೆಣ್ಣು ಎಂದರೆ ಕೇವಲ ಪುರುಷನ ಅಡಿಯಾಳು ಎನ್ನುವ ತಪ್ಪು ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಇದನ್ನು ಹೋಗಲಾಡಿಸಬೇಕಾದರೆ ಮೊದಲು ಹೆಣ್ಣು ಶಿಕ್ಷಣವಂತಳಾಗಿ ಸಮಾಜದಲ್ಲಿ ಸ್ವಾವಲಂಭಿಯಾಗಿ ಬದುಕುವುದನ್ನು ಕಲಿಯಬೇಕು. ಎಲ್ಲದಕ್ಕೂ ಪುರುಷರನ್ನು ಅವಲಂಭಿಸಿಕೊಂಡಿರಬಾರದು. ಸ್ವ-ಉದ್ಯೋಗದಿಂದ ತನ್ನ ಭವಿಷ್ಯವನ್ನು ತಾನೆ ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸರ್ಕಾರವೂ ಕೂಡ ಹೆಣ್ಣು ಮಕ್ಕಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಲ್ಲವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಹೆಣ್ಣು ಸೋಮಾರಿಯಾಗಿ ಮನೆಯಲ್ಲಿ ಕುಳಿತುಕೊಳ್ಳುವುದರಿಂದ ಜೀವನದಲ್ಲಿ ಏನನ್ನು ಸಾಧಿಸಲು ಆಗುವುದಿಲ್ಲ. ಕರಕುಶಲ ತರಬೇತಿಗಳನ್ನು ಪಡೆದುಕೊಳ್ಳಿ. ಬಟ್ಟೆ ಹೊಲಿಯುವುದು, ಬುಟ್ಟಿ ಹೆಣೆಯುವುದು, ಅಡಿಕೆ ಪಟ್ಟೆಗಳಿಂದ ತಟ್ಟೆಗಳನ್ನು ತಯಾರಿಸುವುದು ಸೇರಿದಂತೆ ನೂರಾರು ಬಗೆಯ ಕಸೂತಿ ಕೆಲಸಗಳಿವೆ. ಶ್ರದ್ದೆಯಿಂದ ಕಲಿತರೆ ಮನೆಯಲ್ಲಿಯೇ ಕುಳಿತು ಹಣ ಸಂಪಾದಿಸಬಹುದು ಎಂದು ಹೇಳಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ನ್ಯಾಯವಾದಿಗಳಾದ ಪ್ರತಾಪ್‍ಜೋಗಿ, ಬಿ.ಕೆ.ಫೈಜಾನುಲ್ಲಾ, ಪುಷ್ಪ, ಕೆ.ಕೆ.ಎನ್.ಎಸ್.ಎಸ್. ಉಪಾಧ್ಯಕ್ಷ ರಂಗಸ್ವಾಮಿ ಇವರುಗಳು ವೇದಿಕೆಯಲ್ಲಿದ್ದರು.

 

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

10 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

10 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

10 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

11 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

11 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

11 hours ago