Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : ಹವಮಾನ ಇಲಾಖೆ

---Advertisement---

 

ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಧಾರಾಕಾರ ಮಳೆ ಸುರಿದಿದೆ. ಇನ್ನು ಕೆಲವೆಡೆ ಸಾಧಾರಣ ಮಳೆಯಾಗಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.

ಇನ್ನು ಬೆಂಗಳೂರು ನಗರ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಾನೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಚಳಿಯೂ ಹೆಚ್ಚಾಗುತ್ತಿದೆ. ಇಂದು ಮಂಗಳೂರಿನಿಂದ ಹಿಡಿದು ಉತ್ತರ ಕನ್ನಡದ ಭಾಗದವರೆಗೂ ಮಳೆಯಾಗಲಿದೆ. ತುಮಕೂರು, ತುಮಕೂರು ಜಿಲ್ಲಾ ಕೇಂದ್ರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. 25 ರಿಂದ 30 ಮಿ.ಮೀಟರ್ ನಷ್ಟು ಮಳೆಯಾಗಲಿದೆ ಎಂದು ತಿಳಿಸಿದೆ.

ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ನಡುವೆ ಬಿಸಿಲಿನ ಛಾಯೆಯೂ ಕಾಣಿಸುತ್ತದೆ. ಬಳಿಕ ಮಧ್ಯಾಹ್ನದ ವೇಳೆಗೆ ಮಳೆ ಹೆಚ್ಚಾಗಿ ಬರಲಿದೆ. ಮತ್ತೆ ಹಲವೆಡೆ ರಾತ್ರಿ 8.30 ರ ಸುಮಾರಿಗೆ ಮಳೆ ಸದುರುವಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

Join WhatsApp

Join Now

Join Telegram

Join Now

Leave a Comment