ಬೆಂಗಳೂರು: ಕಳೆದ ಒಂದು ವಾರದಿಂದ ಮತ್ತೆ ಮಳೆರಾಯ ಎಲ್ಲೆಡೆ ತನ್ನ ಅಬ್ಬರ ಆರಂಭಿಸಿದ್ದಾನೆ. ರಾಜ್ಯಾದ್ಯಂತ ಸೋಮವಾರ ಮತ್ತು ಮಂಗಳವಾರ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಬಳ್ಳಾರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಯಾದಗಿರಿ, ರಾಯಚೂರು, ಚಿತ್ರದುರ್ಗ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.