ಬೆಂಗಳೂರು: ಮಾಜಿ ಸಿಎಂ ಬಿಎಸದ ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಮಮತಾ, ಖಾಸಗಿ ಆಸ್ಪತ್ರೆಯಲ್ಲಿ ಜೀವ ಬಿಟ್ಟಿದ್ದಾರೆ.
ದೂರುದಾರೆಗೆ ಉಸಿರಾಟದ ಸಮಸ್ಯೆ ಇತ್ತಂತೆ. ನಿನ್ನೆ ರಾತ್ರಿ ಸುಮಾರು 8.30 ರ ಸಮಯಕ್ಕೆ ಹುಳಿಮಾವು ಬಳಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಕೂಡ ತಕ್ಷಣಕ್ಕೆ ತಪಾಸಣೆ ಮಾಡಿದ್ದಾರೆ. ಅದಾಗಲೇ ಸ್ಯಾಚುರೇಷನದ ಲೆವೆಲ್ ಲೋ ಆಗಿತ್ತಂತೆ. ಕೂಡಲೇ ವೆಂಟಿಲೇಟರ್ ಗೆ ಶಿಫ್ಟ್ ಮಾಡಿ, ಚಿಕಿತ್ಸೆ ಶುರು ಮಾಡಿದ್ದಾರೆ. ಆದರೆ ಅರ್ಜೆಂಟ್ ಮೋಷನ್ ಹೋಗಬೇಕು ಎಂದಿದ್ದಾರೆ. ಚಿಕಿತ್ಸೆ ನೀಡುವ ಮುನ್ನವೇ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ.
ಕಳೆಸ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ ಮಹಿಳೆ ಪೊಲೀಸರುಗೆ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಹಿಕ ಕಿರುಕುಳದ ದೂರು ನೀಡಿದ್ದರು. ತಾಯಿ ಮಗಳು, ಯಡಿಯೂರಪ್ಪ ಅವರ ಮನೆಗೆ ಹೋದಾಗ ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಕೇಳಲು ಹೋಗಿದ್ದೆರು. ಈ ವೇಳೆ ಬಿಎಸ್ವೈ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದರು ಎಂದು ದೂರಿನಲ್ಲಿ ತಿಳಿಸಿದ್ದರು. ಮಹಿಳೆಯ ದೂರನ್ನು ಆಧರಿಸಿ, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಹಾಗೂ ಐಪಿಸಿ ಸೆಕ್ಷನ್ 354(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ನಿವಾಸದಲ್ಲಿ ಈ ಘಟನೆ ನಡೆದಿದೆ ಎಂದು ಎಫ್ಐಆರ್ ಕೂಡ ದಾಖಲಾಗಿತ್ತು. ಇದೀಗ ಆ ಮಹಿಳೆ ಅನಾರೋಗ್ಯದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ.