Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ ಅಂತ್ಯಕ್ಕೆ ಮೊಳಕಾಲ್ಮೂರು ಕ್ಷೇತ್ರದ 46 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣ : ಶಾಸಕ ಎನ್.ವೈ.ಗೋಪಾಲಕೃಷ್ಣ

Facebook
Twitter
Telegram
WhatsApp

 

ಚಿತ್ರದುರ್ಗ.ಡಿ.30: ಮೊಳಕಾಲ್ಮೂರು ಕ್ಷೇತ್ರ ಹಿಂದುಳಿದ ಹಾಗೂ ಗಡಿ ಪ್ರದೇಶವಾಗಿದೆ. ಇಲ್ಲಿ ನೀರಾವರಿ ಅಭಿವೃದ್ಧಿಯಾದರೆ ಕ್ಷೇತ್ರದ ಜನರ ಹಲವಾರು ಸಮಸ್ಯೆಗಳು ಬಗೆ ಹರಿಯುತ್ತವೆ. ಈ ನಿಟ್ಟಿನಲ್ಲಿ ಕ್ಷೇತ್ರದ 46 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಭರವಸೆ ವ್ಯಕ್ತಪಡಿಸಿದರು.

ಶನಿವಾರ ಮೊಳಕಾಲ್ಮೂರು ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಆಯೋಜಿಸಲಾದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ಸಣ್ಣಚಿತ್ತಪ್ಪ ನಮ್ಮ ಭಾಗದವರೇ ಆಗಿದ್ದು, ಜನವರಿ ಕೊನೆಯ ವೇಳೆಗೆ ಕೆರೆಗಳಿಗೆ ಭದ್ರೆಯ ನೀರು ಹರಿಸುವುದಾಗಿ ಹೇಳಿದ್ದಾರೆ. ನೀರಾವರಿ ಯೋಜನೆಯು ವಿಳಂಬವಾದರೆ ನ್ಯಾಯಾಲಯದ ಮೊರೆ ಹೋಗಿ ಹೋರಾಟ ನಡೆಸುವ ಎಚ್ಚರಿಕೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದ್ದೇನೆ. ರಾಜ್ಯ ಸರ್ಕಾರವು ನೀರಾವರಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಿದೆ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ಕಳೆದ 20 ವರ್ಷಗಳಿಂದ ಶಾಸಕನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜನಸಂಖ್ಯೆ ಹೆಚ್ಚಾದ ಹಾಗೇ ಜನರ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಸಮಸ್ಯೆಗೆ ಸ್ಪಂದಿಸಿ ಬಗೆಹರಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜನತಾ ದರ್ಶನ ಮೂಲಕ ಸಕಾರಗೊಳಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ. ರಾಜ್ಯದ ಮಹಿಳೆಯರ ಅಭ್ಯುದಯಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಶಕ್ತಿ ಯೋಜನೆ ಹಾಗೂ ಬಡಕುಟುಂಬಗಳಿಗೆ ಸಹಾಯಧನ ಒದಗಿಸುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ಇದರೊಂದಿಗೆ 200 ಯನಿಟ್ ವರೆಗಿನ ಉಚಿತ ವಿದ್ಯುತ್, 10 ಕೆ.ಜಿ.ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದೆ ಎಂದರು.

ಗ್ಯಾರೆಂಟಿ ಯೋಜನೆಗಳ ಜಾರಿಯಿಂದಾಗಿ ಈ ಬಾರಿ ಶಾಸಕರ ಅನುದಾನದಲ್ಲಿ ಕೊರತೆಯಾಗಿದೆ. ಮುಂದಿನ ಆಯ್ಯವ್ಯಯದಲ್ಲಿ ಎಲ್ಲಾ ಶಾಸಕರಿಗೂ ಹೆಚ್ಚಿನ ಅನುದಾನ ಒದಗಿಸುವ ಭರವಸೆಯನ್ನು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ನೀಡಿದ್ದಾರೆ. ಏಪ್ರಿಲ್ ನಂತರ ಹೊಸ ಶಾಲಾ ಕಟ್ಟಡ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಅನುದಾನ ಒದಗಿಸುವ ಭರವಸೆಯನ್ನು ಶಾಸಕ ಎನ್.ವೈ.ಗೋಪಾಲಕೃಷ್ಣ ನೀಡಿದರು.

ಜನತಾ ದರ್ಶನದಲ್ಲಿ 1268 ಅರ್ಜಿಗಳ ವಿಲೇವಾರಿ:
ಜಿಲ್ಲೆಯಲ್ಲಿ ಕಳೆದ 3 ತಿಂಗಳಿನಲ್ಲಿ 6 ಜನತಾ ದರ್ಶನ ಕಾರ್ಯಕ್ರಗಳನ್ನು ವಿವಿಧ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಜನತಾ ದರ್ಶನದಲ್ಲಿ ಒಟ್ಟು 1393 ಅರ್ಜಿಗಳು ಸ್ವೀಕರಿಸಲಾಗಿದ್ದು, 1268 ಅರ್ಜಿಗಳನ್ನು ವಿಲೆ ಮಾಡಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ವೇದಿಕೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಜನರ ಮನೆ ಬಾಗಿಲಿಗೆ ತೆರಳಿಸಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶವನ್ನು ಜನತಾ ದರ್ಶನ ಕಾರ್ಯಕ್ರಮ ಹೊಂದಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಜನತಾ ದರ್ಶನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಐ.ಪಿ.ಆರ್.ಜಿ.ಎಸ್ ಪೋರ್ಟಲ್ ಮೂಲಕ ಗಣಕೀಕೃತಗೊಳಿಸಲಾಗುವುದು. ಇದರಿಂದ ಸಲ್ಲಿದ ಅರ್ಜಿ ಕಳೆದು ಹೊಯಿತು ಎನ್ನುವ ಪ್ರಸಂಗ ಎದುರಾಗುವುದಿಲ್ಲ. ಗಣಕೀಕೃತಗೊಂಡ ಅರ್ಜಿಗಳನ್ನು ಇಲಾಖಾವಾರು ವಿಂಗಡಿಸಿ ಸಂಬAದಪಟ್ಟ ಅಧಿಕಾರಿಗಳಿಗೆ ರವಾನಿಸಲಾಗುವುದು. ಇದಕ್ಕೆ ಅಧಿಕಾರಿಗಳು ತಕ್ಷಣವೇ ಪರಿಹಾರ ಒದಗಿಸಬೇಕು. ಸರ್ವೇ, ಕಂದಾಯ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಂದಾಯ ಇಲಾಖೆಯಲ್ಲಿ ಇ ಆಫೀಸ್ ಜಾರಿ ಮಾಡಲಾಗಿದೆ. ಗೃಹಲಕ್ಷ್ಮೀ ಸೇರಿದಂತೆ ಗ್ಯಾರೆಂಟಿ ಯೋಜನೆಗಳ ಜಾರಿ ಚಿತ್ರದುರ್ಗ ಜಿಲ್ಲೆ ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.

ಅಂಬೇಡ್ಕರ ಭವನ ಹಾಗೂ ವಸತಿ ಶಾಲೆ ನಿರ್ಮಾಣ:
ಕ್ಷೇತ್ರದಲ್ಲಿ 60 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರು ಇದ್ದಾರೆ. ಈ ಜನರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ಅಂಬೇಡ್ಕರ್ ಭವನ, ಸಂಶೋಧನಾ ಕೇಂದ್ರ ಹಾಗೂ ವಸತಿ ಶಾಲೆ ನಿರ್ಮಾಣ ಮಾಡುವುದಾಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಿಸುವಂತೆ ಜನತಾ ದರ್ಶನದಲ್ಲಿ ಸಾರ್ವಜನಿಕರು ಸಲ್ಲಿಸದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಮೊಳಕಾಲ್ಮೂರಿನ ಸೂರನಹಳ್ಳಿ ಬಳಿ 1.2 ಎಕೆರೆ ಸರ್ಕಾರಿ ಜಾಗ ಇದೆ. ಇದನ್ನು 2012 ರಲ್ಲಿ ಆಹಾರ ಸರಬರಾಜು ಹಾಗೂ ಉಗ್ರಾಣ ಇಲಾಖೆಗೆ ಕಟ್ಟಡ ನಿರ್ಮಿಸಲು ಮಂಜೂರು ಮಾಡಲಾಗಿದೆ. ಆದರೆ 18 ವರ್ಷಗಳಿಂದ ಆಹಾರ ಸರಬರಾಜು ಹಾಗೂ ಉಗ್ರಾಣ ಇಲಾಖೆ ಕಟ್ಟಡ ನಿರ್ಮಿಸಿಲ್ಲ. ಹಾಗಾಗಿ ಜಮೀನು ಹಿಂಪಡೆದು ಅಂಬೇಡ್ಕರ್ ಭವನ ಹಾಗೂ ವಸತಿ ಶಾಲೆ ನಿರ್ಮಾಣಕ್ಕೆ ನೀಡಲಾಗುವುದು. ಜಮೀನು ಲಭಿಸಿದ ನಂತರ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿ ಯೋಜನೆಗೆ ಮಂಜೂರಾತಿ ಪಡೆಯಲಾಗುವುದು ಎಂದರು.

ಬಿ.ಜೆ.ಕೆರೆ ಬಳಿ ಬಸವೇಶ್ವರ ಬಡಾವಣೆ ಸಂಪರ್ಕ ರಸ್ತೆ ಕಡಿತಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆದ್ದಾರಿ ನಿರ್ಮಿಸಿದೆ. ಇದರಿಂದಾಗಿ ರಸ್ತೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ. ಬಸವೇಶ್ವರ ಬಡಾವಣೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಇವೆ. ಬಿ.ಜೆ.ಕೆರೆ ಜನರು ಸುಮಾರು 1 ಕಿ.ಮೀ. ಸುತ್ತಿ ಬಳಿಸಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ತಕ್ಷಣವೇ ಸಮಸ್ಯೆ ಪರಿಷ್ಕಾರ ಒದಗಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಈ ಸಮಸ್ಯೆಯನ್ನು ಶಾಸಕರು ನನ್ನ ಗಮನಕ್ಕ ತಂದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಾಗಾರಿ ಪೂರ್ಣಗೊಂಡಿದೆ. ಆದಾಗ್ಯೂ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಬಿ.ಜಿ.ಕೆರೆ ಹಾಗೂ ಬಸವೇಶ್ವರ ಬಡಾವಣೆ ಸಂಪರ್ಕಕ್ಕೆ ಅಂಡರ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ. ಇದಕ್ಕೆ ಪ್ರಾಧಿಕಾರದಿಂದ ಅನುಮತಿ ದೊರೆತಿದ್ದು ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಇದರ ಜೊತೆಯಲ್ಲಿ ಮೊಳಕಾಲ್ಮೂರು ಪಟ್ಟಣ ವಸತಿ ರಹಿತರಿಗೆ ನಿವೇಶನ, ಚಿಕ್ಕೋಬನಹಟ್ಟಿಗೆ ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ನೇಮಕ, ಅಕಾಲಿಕ ಮಳೆಯಿಂದ ನಾಶವಾದ ಕೋಳಿ ಫಾರಂಗೆ ಪರಿಹಾರ ನೀಡುವಂತೆ ಹಾಗೂ ಇತರೆ ಮನವಿಗಳನ್ನು ಸಾರ್ವಜನಿಕರು ಜನತಾ ದರ್ಶನದಲ್ಲಿ ಸಲ್ಲಿಸಿದರು.

ವಸ್ತು ಪ್ರದರ್ಶನ ಮಳಿಗೆಗಳು :
ಪೊಲೀಸ್ ಇಲಾಖೆಯ ಅಪರಾಧ ತಡೆ ಮಾಸಾಚರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೋಷಣಾ ಅಭಿಯಾನ್, ಕೃಷಿ ಹಾಗೂ ತೋಟಗಾರಿಕೆ ಯೋಜನೆಗಳು, ರೇಷ್ಮೆ ಕೃಷಿ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗಳನ್ನು ಶಾಸಕ ಎನ್.ವೈ.ಗೋಪಾಲಕೃಷ್ಣ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೈತರಿಗೆ ತಾಟು ಪಾಲು, ಪೈಪ್, ಸ್ಪಿಂಕ್ಲರ್ ಸೆಟ್ ಹಾಗೂ ಅಂಗವಿಕಲ ಮಕ್ಕಳಿಗೆ ಸೈಕಲ್ ವಿತರಿಸಲಾಯಿತು. ಗರ್ಭಿಣಿಯರಿಗೆ ಉಡಿ ತುಂಬಲಾಯಿತು. ಇವಿಎಂ ಹಾಗೂ ವಿವಿ ಪ್ಯಾಟ್‌ಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಮೂಲಕ ಸಾರ್ವಜನಿಕರ ಹಲವಾಲುಗಳನ್ನು ಸಲ್ಲಿಸಲು ವಿವಿಧ ಕೌಂಟರ್‌ಗಳನ್ನು ತೆರೆಯಲಾಗಿತ್ತು.

ಈ ಸಂದರ್ಭದಲ್ಲಿ ಉವಿಭಾಗಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ತಹಶೀಲ್ದಾರ್ ರೆಹಮಾನ್ ಪಾಷ, ತಾ.ಪಂ.ಇಓ ಪ್ರಕಾಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!