Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಶ್ರೀಗಳಿಂದ ಇಂದು ಅಧಿಕೃತ ಚಾಲನೆ

---Advertisement---

ಮೈಸೂರು : ನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಕೊಪ್ಪಳ ಸಂಸ್ಥಾನ ಗವಿಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭವು ಚಾಮುಂಡಿ ಬೆಟ್ಟದಲ್ಲಿ ನೆರವೇರಲಿದೆ. ಇಂದು ಬೆಳಿಗ್ಗೆ 11:30 ರಿಂದ 12:13ರ ನಡುವಿನ ಶುಭ ಧನುರ್ ಲಗ್ನದಲ್ಲಿ, ಕೊಪ್ಪಳದ ಗವಿಮಠದ ಪೂಜ್ಯ ಗವಿಸಿದ್ದೇಶ್ವರ ಸ್ವಾಮೀಜಿ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಅಗ್ರಪೂಜಿತ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಶ್ರೀಗಳು ಉತ್ಸವಕ್ಕೆ ಚಾಲನೆ ಒದಗಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಲಿದ್ದಾರೆ.

ಸಾಮಾಜಿಕ ಕಳಕಳಿ, ನಿರಂತರ ಅನ್ನದಾಸೋಹ, ಜಲ ಸಂರಕ್ಷಣೆ ಮತ್ತು ಪರಿಸರ ಕಾಳಜಿಗೆ ಹೆಸರಾದ ಗವಿಮಠದ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂದ ಮಹತ್ವದ ಗೌರವವಾಗಿದೆ. ಶ್ರೀಗಳ ಉಪಸ್ಥಿತಿಯಿಂದಾಗಿ ಈ ಬಾರಿಯ ನಾಡಹಬ್ಬಕ್ಕೆ ವಿಶೇಷವಾದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಮಹತ್ವ ಲಭಿಸಿದೆ.

11 ದಿನಗಳ ಕಾಲ ಕಳೆಗಟ್ಟಲಿದೆ ಸಾಂಸ್ಕೃತಿಕ ಸಂಭ್ರಮ

ಉದ್ಘಾಟನೆಯೊಂದಿಗೆ ಮೈಸೂರಿನಾದ್ಯಂತ ಮುಂದಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ದಸರಾ, ಫಲಪುಷ್ಪ ಪ್ರದರ್ಶನ, ದೀಪಾಲಂಕಾರ ಸೇರಿದಂತೆ ಹಲವು ಆಕರ್ಷಣೆಗಳು ಕಣ್ಮನ ಸೆಳೆಯಲಿವೆ. ವಿಜಯದಶಮಿಯಂದು ಜರುಗಲಿರುವ ಐತಿಹಾಸಿಕ ಜಂಬೂಸವಾರಿಯೊಂದಿಗೆ ನಾಡಹಬ್ಬ ಸಂಪನ್ನಗೊಳ್ಳಲಿದೆ

Join WhatsApp

Join Now

Join Telegram

Join Now