Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಂಗಭೂಮಿ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು : ಡಾ.ಕೆ.ಮೋಹನ್‍ಕುಮಾರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ರಂಗಭೂಮಿ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು. ಸೃಜನಶೀಲತೆ, ಚಿಂತನೆ, ಮೌಲ್ಯಾಧಾರಿತ ವಿಚಾರವಂತಿಕೆ, ಸಂವಹನ, ಅವಧಾನವನ್ನು ಕಲಿಕೆಯಲ್ಲಿ ಕೇಂದ್ರೀಕರಿಸಲು ರಂಗಭೂಮಿಯ ಕಸರತ್ತುಗಳನ್ನು ಪ್ರಶಿಕ್ಷಣಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ಉಪನ್ಯಾಸಕ ಡಾ.ಕೆ.ಮೋಹನ್‍ಕುಮಾರ್ ತಿಳಿಸಿದರು.

ನಗರದ ಕಾಮನಬಾವಿ ಬಡಾವಣೆಯ ಕೋಟೆರಸ್ತೆಯಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಂಗಸೌರಭ ರಂಗೋತ್ಸವದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಣ ಮತ್ತು ರಂಗಭೂಮಿ ವಿಷಯವಾಗಿ ಉಪನ್ಯಾಸ ನೀಡಿದರು.

ಮಗುವಿನಲ್ಲಿ ಕಲಿಕೆಗೆ ಚೈತನ್ಯವನ್ನು ನೀಡಲು ಹಾಗೂ ಶೈಕ್ಷಣಿಕ ಒತ್ತಡವನ್ನು ನಿವಾರಿಸಲು ರಂಗಭೂಮಿ ಸಹಕಾರಿಯಾಗುತ್ತದೆ. ಮಕ್ಕಳಲ್ಲಿ ಶಿಸ್ತು, ಏಕಾಗ್ರತೆ, ಪ್ರಶ್ನಿಸುವ ಹಾಗೂ ಬೌದ್ಧಿಕ ಗುಣಮಟ್ಟವನ್ನು ಹೆಚ್ಚಿಸುವ ಶಕ್ತಿ ರಂಗಭೂಮಿಗಿದೆ ಎಂದರು.

ಚಲನಚಿತ್ರ ಹಾಸ್ಯನಟ, ನಾಟಕಕಾರ ಮೈಸೂರು ರಮಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಕನ್ನಡ ಭಾಷೆಯ ಮೇಲೆ ಹಿಡಿತವನ್ನು ಸಾಧಿಸಬೇಕು. ಅದಕ್ಕಾಗಿ ಕನ್ನಡದ ಸಾಹಿತ್ಯವನ್ನು ಗಟ್ಟಿಯಾಗಿ ಓದುವುದರಿಂದ ಸ್ಪಷ್ಟತೆ ಹಾಗೂ ಭಾಷಾಜ್ಞಾನವನ್ನು ಹೆಚ್ಚಿಸಿಕೊಂಡು ಪರಿಣಾಮಕಾರಿಯಾಗಿ ಬೋಧನೆ ಮಾಡಬಹುದು ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಜಿ.ದಾಸಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಬೋರಪ್ಪಾಜಿಯವರ ಸಂಸ್ಥೆಯು ಕಲಾವಿದರಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದರು. ಉಪನ್ಯಾಸಕರಾದ ಡಾ.ರಾಧಮ್ಮ, ಹೇಮಲತಾ.ಬಿ, ಪಾತಲಿಂಗಪ್ಪ.ಬಿ, ಎಂ.ಪಿ.ನಾಗರಾಜ, ಅಧೀಕ್ಷಕ ಪಾಪಣ್ಣ ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.

ರಂಗಭೂಮಿ ಕಲಾವಿದ ಆರ್.ಅಮಿತಾನಂದ ರಚನೆ ಮತ್ತು ನಿರ್ದೇಶನದಲ್ಲಿ ಹಾಗೂ ಕೆ.ಪಿ.ಎಂ.ಗಣೇಶಯ್ಯ ಸಂಗೀತ ನಿರ್ದೇಶನದ ನಗೆನಾಟಕ ಹೆಂಡತಿಗೆ ಹೆದರದ ಗಂಡ ಎಂಬ ನಾಟಕವನ್ನು ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದರು. ನಾಟಕಕಾರ ಮೈಸೂರು ರಮಾನಂದ ಪ್ರಶಿಕ್ಷಣಾರ್ಥಿಗಳಿಗೆ ಅಂಬೇಡ್ಕರ್ ತತ್ವಾದರ್ಶದಿಂದ ಕೂಡಿದ ರೂಪಕವೊಂದರ ಪ್ರಾತ್ಯಕ್ಷಿಕೆಯನ್ನು ಪ್ರಾಯೋಗಿಕ ಪ್ರದರ್ಶನ ನೀಡಿದರು.

ಪ್ರಶಿಕ್ಷಣಾರ್ಥಿಗಳಾದ ದೀಪಿಕಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕರಿಬಸಮ್ಮ ಸ್ವಾಗತಿಸಿದರು. ಕೋಮಲ ಆರ್. ವಂದಿಸಿದರು. ಪೂಜಾ ರಜಪೂತ್ ಕಾರ್ಯಕ್ರಮ ನಿರೂಪಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment