ರಂಗಭೂಮಿ ಕಲಾವಿದ ಯಶವಂತ್ ಸರದೇಶಪಾಂಡೆ ನಿಧನ

1 Min Read

 

 

ಬೆಂಗಳೂರು: ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಯಶವಂತ ಸರದೇಶಪಾಂಡೆ ಅವರಿಗೆ 62 ವರ್ಷ ವಯಸ್ಸಾಗಿತ್ತು. ಆದರೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿಯಷ್ಟೇ ಧಾರವಾಡದಲ್ಲಿ ನಾಟಕ ನೀಡಿದ್ದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆಯಷ್ಟೇ ಬೆಂಗಳೂರಿಗೆ ಬಂದಿದ್ದರು. ಈಗ ನೋಡಿದ್ರೆ ಅವರೇ ಇಲ್ಲವಾಗಿದೆ.

ಹೃದಯಾಘಾತ ಸಂಭವಿಸಿದ ತಕ್ಷಣವೇ ಯಶವಂತ ಸರದೇಶಪಾಂಡೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ.

ಯಶವಂತ್ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯವರು. ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು‌. ಶಿವಮೊಗ್ಗದ ಹೆಗ್ಗೋಡಿನ ನೀನಾಸಂನಿಂದ ನಾಟಕದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದರು. ಇವರ ಆಲ್ ದಿ ಬೆಸ್ಟ್ ನಾಟಕ ಹೆಚ್ಚು ಜನಪ್ರಿಯತೆಯನ್ನ ಪಡೆದುಕೊಂಡಿತ್ತು.

ಯಶವಂತ ಸರದೇಶಪಾಂಡೆ ಅವರ ಪತ್ನಿ ಮಾಲತಿ ಸರದೇಶಪಾಂಡೆ ಅವರು ಕೂಡ ರಂಗಭೂಮಿ ಕಲಾವಿದರಾಗಿದ್ದಾರೆ. ಪತಿ ಪತ್ನಿ ರಂಗಭೂಮಿ ಕ್ಷೇತ್ರದಲ್ಲಿ ಅಪಾರ ಹೆಸರು ಗಳಿಸಿದ್ದಾರೆ. ಧಾರಾವಾಹಿಗಳ ಸಂಭಾಷಣೆಕಾರರಾಗಿಯೂ ಯಶವಂತ ಸರದೇಶಪಾಂಡೆ ಕೆಲಸ ಮಾಡಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರ ಕುಟುಂಬಸ್ಥರಿಗೆ ಸಹಜವಾಗಿಯೇ ದಿಗ್ಭ್ರಮೆಯಾಗಿದೆ. ಅವರ ಸಾವು ಮನೆಯವರ ಕಂಗೆಡಿಸಿದೆ.

ಮಾಲತಿ ಅವರಿಗೆ ಇದು ಊಹಿಸಲಾರದ ಘಟನೆಯಾಗದೆ. ರಂಗಭೂಮಿ ಕಲಾವಿದನ ನಿಧನಕ್ಕೆ ರಂಗಭೂಮಿ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಆರೋಗ್ಯವಾಗಿಯೇ ಇದ್ದ ಯಶವಂತ ಸರದೇಶಪಾಂಡೆ ಅವರಿಗೆ ಇದ್ದಕ್ಕಿದ್ದ ಹಾಗೇ ಹೃದಯಾಘಾತವಾಗಿದ್ದು, ಎಲ್ಲರಿಗೂ ನೋವು ತರಿಸಿದೆ. ಅಕ್ಟೋಬರ್ ತಿಂಗಳಲ್ಲಿ ಪಂಡಿತ್ ಪ್ರವೀಣ ಗೋಡಖಿಂಡಿ ಅವರೊಂದಿಗೆ ಕೊಳಲು ನಾಟಕದಲ್ಲಿ ಅಭಿನಯಿಸಬೇಕಿತ್ತು. ಅದಕ್ಕಾಗಿ ಎಲ್ಲಾ ತಯಾರಿಯೂ ಆಗಿತ್ತು. ಆದರೆ ಅಷ್ಟರಲ್ಲಿ ಈ ರೀತಿಯ ದುರಂತ ಅಂತ್ಯವಾಗಿದೆ.

Share This Article