Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣದಲ್ಲಿ ರಂಗಕಲೆ : ನಾಳೆ ಒಂದು ದಿನದ ಕಾರ್ಯಾಗಾರ

---Advertisement---

 

ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್. 14 : ನಗರದ ಕೋಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಂಗಸೌರಭ ಕಲಾ ಸಂಘ, ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಶಿಕ್ಷಣದಲ್ಲಿ ರಂಗಕಲೆ (ಆಂಗಿಕ, ವಾಚಿಕ, ಆಹಾರ್ಯ, ಸಾತ್ವಿಕ ಅಭಿನಯ ಹಾಗೂ ನವರಸ) ರಂಗಭೂಮಿ ಕಾರ್ಯಾಗಾರದ ಕಾರ್ಯಕ್ರಮವನ್ನು ದಿನಾಂಕ 16-04-2025ನೇ ಬುಧವಾರ ಬೆಳಿಗ್ಗೆ 10-30ಕ್ಕೆ ಏರ್ಪಡಿಸಲಾಗಿದೆ.

ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಜಿ.ಬಸವರಾಜಪ್ಪ ಅಧ್ಯಕ್ಷತೆ ವಹಿಸುವರು. ರಂಗವಿಮರ್ಶಕ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ವಿ.ಬಸವರಾಜ್ ಪ್ರಶಿಕ್ಷಣಾರ್ಥಿಗಳಿಗೆ ರಂಗಭೂಮಿ ಅವಶ್ಯಕತೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ಉಪನ್ಯಾಸಕರಾದ ಡಾ.ಕೆ.ಮೋಹನ್‍ಕುಮಾರ್, ಬಿ.ಎಸ್.ನಟರಾಜ್, ಸುದರ್ಶನ್ ಹಾಗೂ ಎಮ್.ಸ್ವಾತಿ, ಯೋಗಶಿಕ್ಷಕ ಎಂ.ಬಿ.ಮುರುಳಿ ಮುಂತಾದವರು ಮುಖ್ಯಅತಿಥಿಯಾಗಿ ಉಪಸ್ಥಿತರಿರುವರು. ರಂಗ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಯಾಗಿ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ದ್ವಿತೀಯ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಪಠ್ಯಾಧಾರಿತ ಪ್ರಾಯೋಗಿಕ ರಂಗ ತರಬೇತಿ ನೀಡಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ನಿರ್ದೇಶಕ ಪಿ.ಎನ್.ಗಿರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment