Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಧಾನಪರಿಷತ್ತಿಗೆ ಅರ್ಹರನ್ನು ಆಯ್ಕೆ ಮಾಡಿದಾಗ ಮಾತ್ರ ತಮ್ಮ ಸಮಸ್ಯೆಗಳು ಬಗೆಹರಿಯಲು ಸಾಧ್ಯ; ಲೋಕೇಶ್ ತಾಳಿಕಟ್ಟೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.13 : ಆಳುವ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದಾಗ ಮಾತ್ರ ದೇಶ ಹಾಗೂ ರಾಜ್ಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಆದರೆ ಶಿಕ್ಷಣಕ್ಕೆ ಸರ್ಕಾರಗಳು ಬಜೆಟ್ ನಲ್ಲಿ ಅತ್ಯಂತ ಕಡಿಮೆ ಮೊತ್ತದ ಅನುದಾನವನ್ನು ಮೀಸಲಿರಿಸಿ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿವೆ ಎಂದು ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಆಕಾಂಕ್ಷಿ ಲೋಕೇಶ್ ತಾಳಿಕಟ್ಟೆ ಅಭಿಪ್ರಾಯ ಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ನಾಲ್ಕೈದು ವರ್ಷಗಳಿಂದ ಸರ್ಕಾರ ಶಿಕ್ಷಣಕ್ಕೆ ಅನ್ಯಾಯವೆಸಗುತ್ತ ಬರುತ್ತಿದೆ.  ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳು ಎಂಬ ತಾರತಮ್ಯ ಅನುಸರಿಸಿ ಇಲ್ಲ ಸಲ್ಲದ ಕಾನೂನುಗಳನ್ನು ರೂಪಿಸಿ ಖಾಸಗಿ ಶಾಲೆಗಳನ್ನು ಸರ್ವನಾಶ ಮಾಡಲು ಹೊರಟಿದೆ.  ಇತ್ತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸದೆ ಖಾಸಗಿ ಶಾಲೆಗಳನ್ನು ಬದುಕಲು ಬಿಡದೆ ಖಾಸಗಿ ಶಾಲೆಗಳ ನವೀಕರಣ ಹೊಸ ಶಾಲೆಗಳಿಗೆ ಅನುಮತಿ ಆರ್ ಟಿ ಇ ಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡದೆ ಭ್ರಷ್ಟಾಚಾರವನ್ನು ಎಸೆಗುತ್ತಿದ್ದು ಇದರಿಂದಾಗಿ ಖಾಸಗಿ ಶಾಲೆಗಳು ನಡೆಸುವುದೇ ಕಷ್ಟಕರವಾಗಿದೆ. ಸರ್ಕಾರ 2018 ರಿಂದ ಇತ್ತೀಚಿನವರೆಗೆ ಮಕ್ಕಳ ದಾಖಲಾತಿ ಕೊರತೆಯಿಂದ ಸುಮಾರು 20,000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ.

ಇಂತಹ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ 2024ರ ಮೇ ತಿಂಗಳಿನಲ್ಲಿ ನಡೆಯಲಿರುವ ಐದು ಜಿಲ್ಲೆಗಳ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛೆ ಹೊಂದಿದ್ದು ಅನುದಾನ ಅನುದಾನ ರಹಿತ ಸರ್ಕಾರಿ ಶಾಲೆಗಳ ಎಲ್ಲಾ ಶಿಕ್ಷಕರು ಬೆಂಬಲ ನೀಡಿದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ವಿಧಾನಸೌಧದಲ್ಲಿ ಧ್ವನಿ ಎತ್ತಲು ಸಹಾಯಕವಾಗುತ್ತದೆ. ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಅರಿಯದ ರಾಜಕಾರಣಿಗಳನ್ನು ಗೆಲ್ಲಿಸಿಕೊಳ್ಳುತ್ತಿರುವುದರಿಂದ ನಮ್ಮ ಸಮಸ್ಯೆಗಳು ಇಂದಿಗೂ ಬಗೆಹರಿಯದೆ ಉಳಿದಿವೆ ಇಂತಹ ಕಷ್ಟಕರ ಸಂದಿಗ್ದ ಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಬೆಂಬಲಿಸಿ, ವಿಧಾನಪರಿಷತ್ ಗೆ ಆಯ್ಕೆ ಮಾಡಿದರೆ ಪ್ರಾಮಾಣಿಕವಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲಕರವಾಗುತ್ತದೆ ಎಂದು ತಿಳಿಸಿದರು.

ಅನುದಾನ ರಹಿತ ಶಾಲೆಗಳ ತಾಲೂಕು ಅಧ್ಯಕ್ಷ ಯಾದಲಗಟ್ಟೆ ಜಗನ್ನಾಥ್ ಮಾತನಾಡಿ ಲೋಕೇಶ್ ತಾಳಿಕಟ್ಟೆಯವರು ಸತತ ನಾಲ್ಕು ವರ್ಷಗಳಿಂದ ರಾಜ್ಯದ ವಿವಿಧ ಮೂಲಗಳಲ್ಲಿ ಸಂಚರಿಸಿ ಖಾಸಗಿ ಅನುದಾನ ಅನುದಾನ ರಹಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ ಕಳೆದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದ್ದಾರೆ ಶಿಕ್ಷಕರ ಎಲ್ಲ ಸಮಸ್ಯೆಗಳು ಬಗೆಹರಿಯಬೇಕಾದರೆ ಶಿಕ್ಷಣದ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಜ್ಞಾನ ಹೊಂದಿರುವವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹೀಗಾಗಿ ಅವರನ್ನು ನಾವೆಲ್ಲರೂ ಬೆಂಬಲಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ್ ದಯಾನಂದ್ ರವಿಕುಮಾರ್ ಗೌರೀಶ್ ಸುಭಾಷ್ ಶೌಕತ್ ಅಲಿ ಚಂದ್ರಣ್ಣ ರಾಮು ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...