*ರೈತರ ಬದುಕಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗುವುದು: ಎಸ್ ಟಿ ಸೋಮಶೇಖರ್*
ಬೆಂಗಳೂರು: ರೈತರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದು, ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಕೃಷಿ ಸಾಲ ನೀಡುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿಯೇ ಅಲ್ಪಾವಧಿ, ಮಧ್ಯಮಾವಧಿ/ದೀರ್ಘಾವಧಿ ಸಾಲ ವಿತರಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಅಲ್ಪಾವಧಿ ಸಾಲ ನೀಡಿಕೆ ವಿಭಾಗದಲ್ಲಿ 30,25,788 ರೈತರಿಗೆ 19,370 ಕೋಟಿ ರೂ. ಸಾಲ ನೀಡಿಕೆ ಗುರಿಯನ್ನು ಹೊಂದಿದೆ. ಈಗಾಗಲೇ 12,25,027 ರೈತರಿಗೆ 8,742.10 ಕೋಟಿ ರೂ. ಸಾಲ ವಿತರಿಸಿ ಶೇ. 45.55 ಸಾಧನೆ ಮಾಡಿದೆ. ಅಲ್ಲದೇ, ಮಧ್ಯಮಾವಧಿ/ದೀರ್ಘಾವಧಿ ಸಾಲ ನೀಡಿಕೆ ವಿಭಾಗದಲ್ಲಿ 59,856 ರೈತರಿಗೆ 1,440 ಕೋಟಿ ರೂಪಾಯಿ ಸಾಲ ನೀಡಿಕೆ ಗುರಿಯನ್ನು ಹಾಕಿಕೊಳ್ಳಲಾಗಿದೆ.ಇದರಲ್ಲಿ 10009 ರೈತರಿಗೆ 394.79 ಕೋಟಿ ರೂಪಾಯಿಯನ್ನು ಸಾಲವಾಗಿ ವಿತರಿಸಲಾಗಿದೆ. ಈ ಮೂಲಕ ಶೇ. 27.41ರಷ್ಟು ಸಾಧನೆ ತೋರಲಾಗಿದೆ. ಅಂದರೆ, ಈ ಮೂರೂ ವಿಭಾಗದಲ್ಲಿ ಒಟ್ಟಾರೆಯಾಗಿ 30,85,644 ರೈತರಿಗೆ 20810 ಕೋಟಿ ರೂ. ಕೃಷಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ ಅಕ್ಟೋಬರ್ 23ರವರೆಗೆ 12,35,033 ರೈತರಿಗೆ 9,136.89 ಕೋಟಿ ರೂಪಾಯಿ ಸಾಲವನ್ನು ನೀಡುವ ಮುಖಾಂತರ ಶೇ. 72.96 ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ.
ರೈತರ ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ಸಹ 21 ಡಿಸಿಸಿ ಬ್ಯಾಂಕ್‌ಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅರ್ಹ ಫಲಾನುಭವಿಗಳಿಗೆ ಸಾಲ ಕೊಡುವಂತೆ ಸೂಚಿಸಿರುವುದಾಗಿ ಎಂದು ಸಹಕಾರ ಸಚಿವರು ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್‌ಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಶೀಘ್ರದಲ್ಲೇ ಕರೆದು ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿರುವ ಸಚಿವರು, ಈ ಮೂಲಕ ಬ್ಯಾಂಕ್‌ಗಳು ತೋರಿರುವ ಸಾಧನೆ, ಎದುರಿಸುತ್ತಿರುವ ಸಣ್ಣಪುಟ್ಟ ತೊಡಕುಗಳು, ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಪರಿಹಾರಗಳನ್ನು ಸೂಚಿಸಲು ನಿರ್ಧರಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…